ಉಪಚುನಾವಣೆ ಮೂಲಕ ಕಾಂಗ್ರೆಸ್‌ ಗೂಂಡಾಗಿರಿಗೆ ಅಂತ್ಯವಾಡಬೇಕಿದೆ: ಸಚಿವ ಅಶೋಕ

First Published | Oct 21, 2020, 9:53 AM IST

ಬೆಂಗಳೂರು(ಅ.21): ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕನಕನಪುರದ ಆಟ ನಡೆಯುವುದಿಲ್ಲ. ಇದನ್ನು ಚುನಾವಣೆಯಲ್ಲಿ ತೋರಿಸಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಬುಧವಾರ ಸಂಜೆ ಕ್ಷೇತ್ರದಲ್ಲಿ ಮತದಾರರ ಸಭೆ ನಡೆಸಿದ ವೇಳೆ ಮಾತನಾಡಿ, ಈ ಚುನಾವಣೆ ಮೂಲಕ ಕಾಂಗ್ರೆಸ್‌ ಗೂಂಡಾಗಿರಿಗೆ ಅಂತ್ಯವಾಡಬೇಕಿದೆ. ಯಾರಿಗೂ ಹೆದರುವ ಅಗತ್ಯವಿಲ್ಲ. ಬಿಜೆಪಿಯ ಘಟಾನುಘಟಿ ನಾಯಕರು ಹಾಗೂ ಕಾರ್ಯಕರ್ತರ ಪಡೆಯೇ ಇಲ್ಲಿದೆ. ಹೀಗಾಗಿ ಧೈರ್ಯವಾಗಿ ಚುನಾವಣೆ ಎದುರಿಸುವ ಮೂಲಕ ಮುನಿರತ್ನ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
undefined
ಮಂತ್ರಿಯಾಗಬೇಕೆಂಬ ಉದ್ದೇಶದಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಶಾಸಕರು ಬಿಜೆಪಿಗೆ ಬಂದಿಲ್ಲ. ಅಲ್ಲಿ ಗೌರವ ಸಿಗದಿದ್ದಾಗ, ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಅನ್ಯ ಪಕ್ಷದಿಂದ ಬಂದವರಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಇವರೆಲ್ಲ ಋುಣವನ್ನು ನಾವು ತೀರಿಸಬೇಕಿದ್ದು, ಈ ಮೂಲಕ ಯಡಿಯೂರಪ್ಪ ಅವರ ಕೈ ಇನ್ನಷ್ಟು ಬಲಪಡಿಸಬೇಕು ಎಂದು ತಿಳಿಸಿದ್ದಾರೆ.
undefined

Latest Videos


ಬೆಂಗಳೂರಿನ ಕ್ಷೇತ್ರಗಳ ಪೈಕಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು 950 ಕೋಟಿ ಅನುದಾನ ನೀಡಲಾಗಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇನ್ನು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಉಪಚುನಾವಣೆ ಸರ್ಕಾರಕ್ಕೆ ಒಂದು ದಿಕ್ಸೂಚಿಯಾಗಲಿದೆ. ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
undefined
ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಹೆಚ್ಚು ಅಂತರದ ಗೆಲುವು ತಂದು ಕೊಡುವಲ್ಲಿ ಕಾರ್ಯಕರ್ತರು ಶ್ರಮಿಸಬೇಕು. ಮುನಿರತ್ನ ಅಭ್ಯರ್ಥಿ ಮಾತ್ರವಲ್ಲ, ನಾವೇ ಅಭ್ಯರ್ಥಿಗಳು ಎಂದುಕೊಂಡು ಪ್ರತಿಯೊಬ್ಬರು ಕೆಲಸ ಮಾಡಬೇಕು ಎಂದು ತಿಳಿಸಿದರು.
undefined
ಸಚಿವರಾದ ಎಸ್‌.ಟಿ.ಸೋಮೇಶಖರ್‌, ಭೈರತಿ ಬಸವರಾಜು, ಶಾಸಕರಾದ ಅರವಿಂದ ಲಿಂಬಾವಳಿ, ಸತೀಶ್‌ ರೆಡ್ಡಿ, ಎಸ್‌.ಆರ್‌.ವಿಶ್ವನಾಥ್‌ ಸ್ಥಳೀಯರ ಮುಖಂಡರು ಹಾಜರಿದ್ದರು.
undefined
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
undefined
click me!