ಸರ್ಕಾರಿ ಆಸ್ಪತ್ರೆಗೆ ಸಚಿವ ರಾಮುಲು ದಾಖಲು: ಚಿಕಿತ್ಸೆ ಪಡೆಯುತ್ತಿರೋ ಫೋಟೋಗಳು ವೈರಲ್

First Published | Aug 9, 2020, 9:29 PM IST

ಜನಸಾಮಾನ್ಯರಿಗೆ ಸರ್ಕಾರಿ ಆಸ್ಪತ್ರೆ, ಜನನಾಯಕರಿಗೆ ಐಷಾರಾಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ  ತಾರತಮ್ಯದ ಬಗ್ಗೆ ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಶ್ರೀರಾಮುಲು ಮಾದರಿಯಾಗಿದ್ದಾರೆ. ಹೌದು...ಇಂದು ಮಧ್ಯಾಹ್ನದ ವೇಳೆಗೆ ಶ್ರೀರಾಮುಲು ಅವರಿಗೆ ಕೊರೋನಾ ಇರೋದು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಸರ್ಕಾರಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾನ್ಯವಾಗಿ ಜನಪ್ರತಿನಿಧಿಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಹೈಫೈ ವಾರ್ಡ್​​ಗಳಲ್ಲಿ ಚಿಕಿತ್ಸೆ ಪಡೆದುಕೊಂಡು ಬರುತ್ತಾರೆ. ಆದರೆ ಶ್ರೀರಾಮುಲು ಸರ್ಕಾರಿ
ಆಸ್ಪತ್ರೆಯ ಸಾಮಾನ್ಯ ವಾರ್ಡಿನಲ್ಲಿಯೇ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿರುವ ಫೋಟೋಗಳು ಇಲ್ಲಿವೆ.
 

ಜನಸಾಮಾನ್ಯರಿಗೆ ಸರ್ಕಾರಿ ಆಸ್ಪತ್ರೆ, ಜನನಾಯಕರಿಗೆ ಐಷಾರಾಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ತಾರತಮ್ಯದ ಬಗ್ಗೆ ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಮಾದರಿಯಾಗಿದ್ದಾರೆ.
ಇಂದು ಮಧ್ಯಾಹ್ನದ ವೇಳೆಗೆ ಶ್ರೀರಾಮುಲು ಅವರಿಗೆ ಕೊರೋನಾ ಇರೋದು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಸರ್ಕಾರಿ ಆಸ್ಪತ್ರೆ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಾದಬೌರಿಂಗ್​ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Tap to resize

ಸಾಮಾನ್ಯವಾಗಿ ಜನಪ್ರತಿನಿಧಿಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಹೈಫೈ ವಾರ್ಡ್​​ಗಳಲ್ಲಿ ಚಿಕಿತ್ಸೆ ಪಡೆದುಕೊಂಡು ಬರುತ್ತಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಬೌರಿಂಗ್ ಆಸ್ಪತ್ರೆಯ ಸಾಮಾನ್ಯ ವಾರ್ಡಿನಲ್ಲಿಯೇ ದಾಖಲಾಗಿದ್ದಾರೆ.
ತುಕ್ಕು ಹಿಡಿದಿರುವ ಸಾಮಾನ್ಯ ಕಾಟ್​ನಲ್ಲಿರುವ ಬೆಡ್​ ಮೇಲೆ ರಾಮುಲು ಕುಳಿತುಕೊಂಡಿರು ದೃಶ್ಯ.
ಸರ್ಕಾರಿ ಆಸ್ಪತ್ರೆಯ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀರಾಮುಲು
ವೈದ್ಯರು ಚಿಕಿತ್ಸೆ ನೀಡುತ್ತಿರುವ ಫೋಟೋ

Latest Videos

click me!