ಬೆಂಗಳೂರು(ಆ.06): ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ದೃಢಪಟ್ಟಿದೆ. ಹೀಗಾಗಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಶೀಘ್ರವಾಗಿ ಕೊರೋನಾದಿಂದ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ರಾಜ್ಯಾದ್ಯಂತ ಹೋಮ, ಹವನಗಳನ್ನ ನಡೆಸುತ್ತಿದ್ದಾರೆ.