ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

Published : Jan 16, 2023, 04:23 PM IST

ಬೆಂಗಳೂರು (ಜ.16): ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ವತಿಯಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ನಾಯಕತ್ವ ನೀಡುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ 'ನಾ ನಾಯಕಿ' ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಮುಖ ಆಕರ್ಷಣೆ ಆಗಿದ್ದರು. ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ ಪ್ರತಿಯೊಂದು ಕ್ಷಣವನ್ನೂ ಕಾಂಗ್ರೆಸ್‌ ನಾಯಕರು ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ವಿಮಾನ ನಿಲ್ದಾಣದಿಂದ ಬರುವ ರಸ್ತೆಯಲ್ಲಿಯೇ ಟೋಲ್‌ ಬಳಿ ಬೃಹತ್‌ ಸೇಬಿನ ಹಾರವನ್ನು ಹಾಕಿ ಸ್ವಾಗತಿಸಲಾಯಿತು. ಇನ್ನು ನಾ ನಾಯಕಿ ಕಾರ್ಯಕ್ರಮದಲ್ಲಿ ಯಾವೊಬ್ಬ ಪುರುಷರಿಗೂ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಮಹಿಳೆಯರಷ್ಟೇ ವೇದಿಕೆ ಮೇಲೆ ಆಸೀನರಾಗಿದ್ದರು. 

PREV
16
ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

ನಾ ನಾಯಕಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದರು.

26

ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುವ ವೇಳೆ ಸಾದಹಳ್ಳಿ ಗೇಟ್‌ ಬಳಿ ಪ್ರಿಯಾಂಕಾ ಗಾಂಧಿಗೆ ಕ್ರೇನ್ ಮೂಲಕ ಬೃಹತ್ ಸೇಬಿನ ಹಾರವನ್ನು ಕಾರ್ಯಕರ್ತರು ಹಾಕಿದರು. 

36

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮಕ್ಕೆ ಪ್ರಿಯಾಂಕ ಗಾಂಧಿ ಆಗಮನದ ವೇಳೆ ಮಹಿಳೆಯರು ಜೋರಾಗಿ ಘೋಷಣೆ ಕೂಗಿದರು. ಮಹಿಳೆಯರು ಕೈ ಕುಲುಕಿ ಸಂತಸ ಪಟ್ಟರು.

46

ನಾ ನಾಯಕಿ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಕಂಡುಬಂದ ಪ್ರಿಯಾಂಕಾ ಗಾಂಧಿ.

56

ಪ್ರಿಯಾಂಕ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ನಾ ನಾಯಕಿ ವೇದಿಕೆಯಲ್ಲಿ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ 'ಗೃಹಲಕ್ಷ್ಮಿ' ಯೋಜನೆಯನ್ನು ಘೋಷಣೆ ಮಾಡಿದರು.

66

ನಾ ನಾಯಕಿ ಕಾರ್ಯಕ್ರಮದಲ್ಲಿ ಪುರುಷರಿಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಮಹಿಳೆಯರಷ್ಟೇ ವೇದಿಕೆ ಮೇಲೆ ಆಸೀನರಾಗಿದ್ದರು. ಪ್ರತಿಜ್ಞಾ ವಿಧಿ ಸ್ವೀಕಾರದ ವೇಳೆ ಕಂಡುಬಂದ ದೃಶ್ಯ. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories