ಬಳ್ಳಾರಿ ಜಿಲ್ಲಾ ಬಿಜೆಪಿ ಘಟಕದಿಂದ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಈಶಾನ್ಯ ವಲಯ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಯ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶ, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಇರಲಿಲ್ಲ. ಆದರೂ ಶಿಕ್ಷಕರು ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದಾರೆ. ಆದರೆ ಈಗ ಕೇಂದ್ರ, ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ನಿಮ್ಮ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಿ ಗೆಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಲ್ಕು ವಿಧಾನ ಪರಿಷತ್, ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ ಕೂಡ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಕಾಂಗ್ರೆಸ್‌ನಲ್ಲಿ ಆರ್.ಆರ್. ನಗರ ಒಬ್ಬರಿಗೆ ಹಾಗೂ ಶಿರಾ ಒಬ್ಬರಿಗೆ ವಹಿಸಲಾಗಿದೆ. ಶಿರಾದವರು ಆರ್‌ಆರ್ ನಗರದವರಿಗೆ ಹಾಗೂ ಆರ್‌ಆರ್ ನಗರದವರು ಶಿರಾದವರಿಗೆ ಸೋಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ವ್ಯಂಗ್ಯವಾಡಿದರು.
ಅರಣ್ಯ ಸಚಿವ ಆನಂದ್ ಸಿಂಗ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲ ಕ್ಷೇತ್ರದಲ್ಲಿ ಗುಂಪುಗಾರಿಕೆ ಇರುವುದು ಸಹಜ. ಆದರೆ ಆ ಗುಂಪುಗಾರಿಕೆ ಬಿಟ್ಟು ಬಿಜೆಪಿ ಅಭ್ಯರ್ಥಿ ಬಹಳ ಅನುಭವ ಇರುವ ಶಶಿಲ್ ನಮೋಶಿ ಅವರ ಗೆಲುವಿಗೆ ಕಾರಣರಾಗಬೇಕು ಎಂದರು.
ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ, ಶಾಸಕರಾದ ಕರಣಾಕರ ರೆಡ್ಡಿ, ಶಾಸಕ ಸೋಮಶೇಖರ್ ರೆಡ್ಡಿ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್, ವಿಭಾಗದ ಪ್ರಭಾರಿ ಸಿದ್ದೇಶ್, ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಹುಡಾ ಅಧ್ಯಕ್ಷ ಅಶೋಕ ಜೀರೆ, ಮಾಜಿ ಶಾಸಕ ನೇಮಿರಾಜ್ ನಾಯ್ಕ, ಬ್ರಾಹ್ಮಣ ನಿಗಮದ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ರಾಮಲಿಂಗಪ್ಪ, ಅನಿಲ್ ನಾಯ್ಡು ಮತ್ತಿತರರಿದ್ದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಮಾತನಾಡಿ, ಡಿಕೆ ಸಹೋದರರನ್ನು ಕಟ್ಟಿಹಾಕಲು ಸಂಸದ ಡಿ.ಕೆ. ಸುರೇಶ್ ಪ್ರತಿನಿಧಿಸುವ ಆರ್.ಆರ್. ನಗರ ಕ್ಷೇತ್ರದಲ್ಲೇ ಕಾಂಗ್ರೆಸ್‌ನವರು ಬಿಜೆಪಿ ಗೆಲ್ಲಿಸಲಿದ್ದಾರೆ. ಶಿರಾ ಹಾಗೂ ಆರ್‌ಆರ್ ನಗರದಲ್ಲಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಸಿ, ಡಿಕೆಶಿ ಎಂದೂ ರಾಜ್ಯದಲ್ಲಿ ತಲೆ ಎತ್ತಿ ಓಡಾಡದಂತೆ ಕಾಂಗ್ರೆಸ್‌ನವರೇ ಮಾಡಲಿದ್ದಾರೆ. ಮಾಜಿ ಸಚಿವ ಟಿ.ಬಿ. ಜಯಚಂದ್ರ ಶಿರಾದಲ್ಲಿ ಶಿರವೇ ಇಲ್ಲದಂತೆ ಮಾಡಿದ್ದಾರೆ. ಅಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಎಂದರು.