ಪ್ರಧಾನಿ ಮೋದಿ ನನ್ನ ದೇವರು, ಆದರೆ ಅವರ ಕಾರ್ಯಕ್ರಮಕ್ಕೆ ಹೋಗಲ್ಲ: ಕೆ.ಎಸ್.ಈಶ್ವರಪ್ಪ

Published : Mar 18, 2024, 07:03 AM IST

ಪ್ರಧಾನಿ ನರೇಂದ್ರ ಮೋದಿ ನನ್ನ ದೇವರು. ಪ್ರಾಣ ಹೋದರೂ ಅವರ ಹೆಸರು ಹೇಳುವುದನ್ನು ಬಿಡುವುದಿಲ್ಲ. ಅವರು ಸೋಮವಾರ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಅವರ ಜತೆಗೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.  

PREV
14
ಪ್ರಧಾನಿ ಮೋದಿ ನನ್ನ ದೇವರು, ಆದರೆ ಅವರ ಕಾರ್ಯಕ್ರಮಕ್ಕೆ ಹೋಗಲ್ಲ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ (ಮಾ.18): ಪ್ರಧಾನಿ ನರೇಂದ್ರ ಮೋದಿ ನನ್ನ ದೇವರು. ಪ್ರಾಣ ಹೋದರೂ ಅವರ ಹೆಸರು ಹೇಳುವುದನ್ನು ಬಿಡುವುದಿಲ್ಲ. ಅವರು ಸೋಮವಾರ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಅವರ ಜತೆಗೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

24

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಏಕಕುಟುಂಬದ ಕಪಿಮುಷ್ಟಿಯಿಂದ ಪಕ್ಷವನ್ನು ಬಿಡುಗಡೆ ಮಾಡಬೇಕು ಎನ್ನುವ ಉದ್ದೇಶದಿಂದ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಗೆದ್ದ ಬಳಿಕ ಮೋದಿ ಬಳಿ ಹೋಗುವೆ. ಆದರೆ ಸೋಮವಾರ ನಡೆಯುವ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ. ಇದರ ಬಗ್ಗೆ ದುಃಖವಿದೆ ಎಂದು ತಿಳಿಸಿದರು.

34

'ನಾನು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಸಂಧಾನಕ್ಕಾಗಿ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸಿ ಕೊಟ್ಟಿದ್ದರು. ನಾನು ಅವರ ಸಂಧಾನಕ್ಕೆ ಒಪ್ಪಿಲ್ಲ. ನನ್ನ ಪುತ್ರನಿಗೆ ಟಿಕೆಟ್ ತಪ್ಪಿಸಿದ್ದು ಮಾತ್ರವಲ್ಲ, ನನಗೆ ಯಡಿಯೂರಪ್ಪ ಕುಟುಂಬದವರು ಮೋಸ ಮಾಡಿದ್ದಾರೆ' ಎಂದು ದೂರಿದರು.

44

ಯಡಿಯೂರಪ್ಪ ಹಾಗೂ ಅವರ ಪುತ್ರರ ಕೈಯಲ್ಲಿ ಪಕ್ಷ ನಲುಗುತ್ತಿದೆ. ಲಿಂಗಾಯತರೆಲ್ಲರೂ ಯಡಿಯೂರಪ್ಪ ಅವರ ಕೈಯಲ್ಲಿದ್ದಾರೆಂಬ ಭ್ರಮೆಯಲ್ಲಿ ಕೇಂದ್ರದ ನಾಯಕರಿದ್ದಾರೆ. ಪಕ್ಷ ನಿಷ್ಠೆಯಿಂದ ಹಲವಾರು ವರ್ಷಗಳಿಂದ ಇದ್ದೇನೆ. ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರದೇ ರಾಜ್ಯಭಾರವಾಗಿದೆ ಎಂದು ಆರೋಪಿಸಿದರು.

Read more Photos on
click me!

Recommended Stories