ಲೋಕಸಭಾ ಚುನಾವಣೆ 2024: ಕೋಲಾರದಲ್ಲಿ ಕಾಂಗ್ರೆಸ್‌ ನಾಯಕರ ಭರ್ಜರಿ ಪ್ರಚಾರ, ರಾಗಾ, ಖರ್ಗೆ ಭಾಗಿ

First Published | Apr 17, 2024, 2:48 PM IST

ಕೋಲಾರ(ಏ.17):  ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇನ್ನು ಕೋಲಾರದಲ್ಲೂ ಕೂಡ ಕಾಂಗ್ರೆಸ್‌ದ ನಾಯಕರು ಭರ್ಜರಿ ಪ್ರಚಾರವನ್ನ ಕೈಗೊಂಡಿದ್ದಾರೆ. ಇಂದು(ಬುಧವಾರ) ಕೂಡ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರ ಮಾಡಲಿದ್ದಾರೆ. 

ಇಂದಿನ ಪ್ರಜಾಧ್ವನಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಭರ್ಜರಿ ಪ್ರಚಾರ ಮಾಡಿದ್ದಾರೆ. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಾಥ್ ನೀಡಲಿದ್ದಾರೆ. 

ಪ್ರಜಾಧ್ವನಿ ಸಮಾವೇಶದಲ್ಲಿ ರಾಗಾ, ಖರ್ಗೆ ಅವರುಗಳು ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭೆ ಕ್ಷೇತ್ರದಲ್ಲಿ ಸಮಾವೇಶವನ್ನ ಆಯೋಜನೆ ಮಾಡಲಾಗಿದೆ. 

Tap to resize

ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಮಾಡಿಕೊಂಡಿದ್ದಾರೆ. ಮಾಲೂರಿನ ಮಡಿವಾಳ ಗೇಟ್ ಬಳಿಯಿರುವ ಬೃಹತ್ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸಮಾವೇಶಕ್ಕೆ ಬಂದವರಿಗೆ 45 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆಯನ್ನ ಮಾಡಲಾಗಿದೆ. 

ಇಂದಿನ ಪ್ರಜಾಧ್ವನಿ ಸಮಾವೇಶದಲ್ಲಿ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ. ಹೀಗಾಗಿ ಮಾಲೂರಿನ ಮಡಿವಾಳ ಗೇಟ್ ಬಳಿಯಿರುವ ಬೃಹತ್ ಮೈದಾನದಲ್ಲಿ ಬೃಹತ್‌ ವೇದಿಕೆಯನ್ನ ನಿರ್ಮಾಣ ಮಾಡಲಾಗಿದೆ.  

Latest Videos

click me!