ಪಕ್ಷದ ಹೊರತಾಗಿ ರಾಜಕೀಯ ಮುಖಂಡರು ವೈಯಕ್ತಿಕ ಜೀವನದಲ್ಲಿ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡಿರುತ್ತಾರೆ.
undefined
ಪರಸ್ಪರ ವಿರುದ್ಧ ಹೇಳಿಕೆ, ಕೆಸರೆರಚಾಟದ ಹೊರತಾಗಿ ಆತ್ಮೀಯತೆ ಉಳಿಸಿಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ಫೋಟೋ
undefined
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ವಿವಾಹದಲ್ಲಿ ಭಾಗವಹಿಸಿದ್ದಾರೆ.
undefined
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ. ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಮದುವೆ ಫೆ.14ರ ಪ್ರೇಮಿಗಳ ದಿನದಂದು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದಿತ್ತು.
undefined
ಇದೀಗ ಮದುವೆ ರಿಸೆಪ್ಶನ್ನಲ್ಲಿ ಜಾರಕಿಹೊಳಿ ಭಾಗವಹಿಸಿ ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.
undefined
ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನೆರವೇರಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸೇರಿದಂತೆ ನೂರಾರು ಗಣ್ಯರು ಭಾಗವಹಿಸಿದ್ದರು
undefined