renukacharya
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನೇಮಕವಾದ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾಗಿ ರೇಣುಕಾಚಾರ್ಯ ಮತ್ತು ಬಿಎನ್ ಜೀವರಾಜ್ ಕೃತಜ್ಞತೆ ಸಲ್ಲಿಸಿದರು. ರೇಸ್ ಕೋರ್ಸ್ ನಿವಾಸದಲ್ಲಿ ಸಿಎಂ ಭೇಟಿಯಾಗಿ ತಮ್ಮ ಆಯ್ಕೆಯ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
renukacharya
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಹಿನ್ನೆಲೆ ಇಬ್ಬರು ಮುಖಂಡರು ಭೇಟಿಯಾದರು.
renukacharya
ಹಿಂದಿನ ಸರ್ಕಾರದ ಅವಧಿಯಲ್ಲಿ ಇದ್ದ ಸ್ಥಾನಮಾನಗಳನ್ನು ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮರಳಿ ನೀಡಿದ್ದಾರೆ. ಹೊನ್ನಾಳಿ ಶಾಸಕರಾಗಿರುವ ಎಂ ಪಿ ರೇಣುಕಾಚಾರ್ಯ. ಶೃಂಗೇರಿ ಮಾಜಿ ಶಾಸಕರಾಗಿರುವ ಡಿ ಎನ್ ಜೀವರಾಜ್ ಮಹತ್ವದ ಹುದ್ದೆಗಳು ದೊರೆತಿವೆ.
BSY
ಹಿಂದಿನ ಸರ್ಕಾರದ ಅವಧಿಯಲ್ಲಿಯು ಮುಖ್ಯಮಂತ್ರಿಯಾಗಿದ್ದ ಬಿ ಎಸ್ ಯಡಿಯೂರಪ್ಪ ಅವರಿಗೆ ರೇಣುಕಾಚಾರ್ಯ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮತ್ತೊಮ್ಮೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅಧಿಕೃತ ಆದೇಶ ನೀಡಲಾಗಿದೆ.
ಬಿಎಸ್ ಯಡಿಯುರಪ್ಪ ಅವರ ರಾಜಕೀಯ ಕಾರ್ಯದರ್ಶಿ ಯಾಗಿ ಕಾರ್ಯನಿರ್ವಹಿಸಿದ್ದ ನನ್ನನ್ನು ಮತ್ತೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಸಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರಿಗೆ, ರಾಜ್ಯಾಧ್ಯಕ್ಷರಿಗೆ ತುಂಬು ಹೃದಯದ ಕೃತಜ್ಞತೆಗಳು ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.