ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕೋಲಾರ ಜಿಲ್ಲೆ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಯಾವುದೇ ಅಧಿಕೃತ ಪಕ್ಷದ ಹುದ್ದೆ ಇಲ್ಲದಿದ್ದರೂ ಈ ಸೇರ್ಪಡೆ ಕಾರ್ಯಕ್ರಮ ನಡೆಸಿದ್ದಾರೆ. ಇದು ಮುಂದಿನ ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ.
ಸದ್ಯ ಸಚಿವರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರ ಇತ್ತೀಚಿನ ರಾಜಕೀಯ ನಡವಳಿಕೆಗಳು ರಾಜ್ಯ ಕಾಂಗ್ರೆಸ್ (KPCC) ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಇದು ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ಸ್ಥಾನ ಸಿಗುವ ಮುನ್ಸೂಚನೆಯೋ ಅಥವಾ ಆ ಸ್ಥಾನದ ಕಡೆಗೆ ಮುನ್ಸೂಚನೆ ನೀಡುವ ಪ್ರಯತ್ನವೋ ಎಂಬ ಪ್ರಶ್ನೆ ಗಂಭೀರವಾಗಿ ಕೇಳಿಬರುತ್ತಿದೆ.
26
ಕೋಲಾರದ ಮುಖಂಡರ ಪಕ್ಷ ಸೇರ್ಪಡೆ:
ಈ ಎಲ್ಲ ಊಹಾಪೋಹಗಳಿಗೆ ಮುಖ್ಯ ಕಾರಣವಾಗಿರುವುದು ಕೋಲಾರ ಜಿಲ್ಲೆಯ ರಾಜಕಾರಣ. ಇಂದು (ಡಿ.04) ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ ಎನ್. ವೆಂಕಟರಾಮ್ ಅವರು ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
36
ಪಕ್ಷ ಸೇರ್ಪಡೆ ಕಾರ್ಯಕ್ರಮ
ಬೆಂಗಳೂರಿನಲ್ಲಿರುವ ಸತೀಶ್ ಜಾರಕಿಹೊಳಿ ಗೃಹ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ. ನಂಜೇಗೌಡ ಅವರ ಮುಂದಾಳತ್ವದಲ್ಲಿ ಹಲವು ಪ್ರಮುಖರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಈ ಸಂದರ್ಭದಲ್ಲಿ ನೂತನವಾಗಿ ಪಕ್ಷ ಸೇರಿದ ಮುಖಂಡರನ್ನು ಸತೀಶ್ ಜಾರಕಿಹೊಳಿ ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು.
ಏಕೆಂದರೆ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ (KPCC) ಅಧ್ಯಕ್ಷರೂ ಅಲ್ಲ, ಕಾರ್ಯಾಧ್ಯಕ್ಷರೂ ಅಲ್ಲ.
ಅವರು ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರೂ ಅಲ್ಲ.
ಈ ಯಾವುದೇ ಅಧಿಕೃತ ಜವಾಬ್ದಾರಿ ಇಲ್ಲದಿದ್ದರೂ, ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಕೋಲಾರ ಜಿಲ್ಲೆಯ ಪ್ರಮುಖ ಮುಖಂಡರು ಪಕ್ಷ ಸೇರ್ಪಡೆಗೊಂಡಿರುವುದು.
ಹೀಗಾಗಿಯೇ ಇದು ರಾಜಕೀಯದಲ್ಲಿ ಆಕಸ್ಮಿಕ ನಡೆಯಲ್ಲ ಎಂಬ ಸಂದೇಶ ರವಾನಿಸಿದೆ.
56
ಕೆಪಿಸಿಸಿ ಪಟ್ಟದತ್ತ ಜಾರಕಿಹೊಳಿ ಚಿತ್ತ?
ಮಾಲೂರು ಮುಖಂಡರು ಬೇರೆ ಯಾವುದೇ ರಾಜ್ಯ ಮಟ್ಟದ ನಾಯಕರನ್ನು ಬಿಟ್ಟು ನೇರವಾಗಿ ಸತೀಶ್ ಜಾರಕಿಹೊಳಿ ಗೃಹ ಕಚೇರಿಯಲ್ಲಿ ಪಕ್ಷ ಸೇರಿರುವುದು, ಕಾಂಗ್ರೆಸ್ ಹೈಕಮಾಂಡ್‌ನ ವರಿಷ್ಠರ ಮನಸ್ಸಿನಲ್ಲಿರುವ ಆಲೋಚನೆಯನ್ನು ಸೂಚಿಸುತ್ತದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಮುಂದುವರೆಸುತ್ತಿದ್ದಾರೆ.
66
ಲೋಕಸಭಾ ಚುನಾವಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಚೇಂಜ್
ಪಕ್ಷದಲ್ಲಿ ಮುಂದಿನ ಲೋಕಸಭಾ ಚುನಾವಣೆಯ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಸಾಧ್ಯತೆ ಇದೆ ಎಂಬ ಗುಸುಗುಸು ಇದೆ. ಹಾಗಾಗಿ, ಜಾತಿ ಸಮೀಕರಣ ಮತ್ತು ರಾಜ್ಯ ರಾಜಕಾರಣದಲ್ಲಿ ಸತೀಶ್ ಜಾರಕಿಹೊಳಿ ಹಿಡಿತವನ್ನು ಪರಿಗಣಿಸಿ, ಅವರನ್ನು ಮುಂದಿನ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರ ಬಹುತೇಕ ಖಚಿತವಾಯ್ತಾ? ಎಂಬ ಪ್ರಶ್ನೆಗೆ ಇಂದಿನ ಕೋಲಾರದ ಪಕ್ಷ ಸೇರ್ಪಡೆ ಕಾರ್ಯಕ್ರಮವು ಪುಷ್ಟಿ ನೀಡಿದಂತಿದೆ. ಈ ಬೆಳವಣಿಗೆಯು ಸತೀಶ್ ಜಾರಕಿಹೊಳಿ ರಾಜಕೀಯ ಮಹತ್ವಾಕಾಂಕ್ಷೆಗೆ ಹಿಡಿದ ಕೈಗನ್ನಡಿಯಾಗಿದೆ.