ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ ವೇಳೆ ಭಾರೀ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸಚಿವರಿಗೆ ಘೇರಾವ್ ಹಾಕಲು ಮುಂದಾದ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು.
ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ ವೇಳೆ ಭಾರೀ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸಚಿವರಿಗೆ ಘೇರಾವ್ ಹಾಕಲು ಮುಂದಾದ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು.
26
ಕೆಡಿಪಿ ಸಭೆ ಬಳಿ ಪೊಲೀಸರು-ಬಜರಂಗದ ಕಾರ್ಯಕರ್ತರ ನಡುವೆ ಹೈಡ್ರಾಮಾ
ಕೆಡಿಪಿ ಸಭೆಗೆ ಸಚಿವ ಮಧು ಬಂಗಾರಪ್ಪ ಆಗಮಿಸುತ್ತಿದ್ದಂತೆಯೇ ಬಜರಂಗದಳ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟನೆ ಆರಂಭಿಸಿದರು. ಸಚಿವರ ವಿರುದ್ಧ ಘೇರಾವ್ ಹಾಕಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.
36
30ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಪ್ರಮುಖರಾದ ಅಂಕುಶ್, ಯೋಗೇಶ್ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸ್ಥಳಕ್ಕೆ ಎರಡು ಪೊಲೀಸ್ ವ್ಯಾನ್‌ಗಳನ್ನು ತರಿಸಲಾಯಿತು. ಬಳಿಕ ಕಾರ್ಯಕರ್ತರನ್ನು ಬಂಧಿಸಿ ಪೊಲೀಸರು ಸ್ಥಳದಿಂದ ಕರೆದೊಯ್ದರು.
56
ಧಿಕ್ಕಾರ” ಘೋಷಣೆಯಿಂದ ಗದ್ದಲ
ಬಂಧನದ ವೇಳೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕೆಲಕಾಲ ಸಭಾ ಸ್ಥಳದ ಸುತ್ತಮುತ್ತ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.
66
ರೈತರ ಮನವಿ ಸ್ವೀಕರಿಸಿ ತೆರಳಿದ ಸಚಿವ
ಇದರ ನಡುವೆ ಸಚಿವ ಮಧು ಬಂಗಾರಪ್ಪ ಕೇವಲ ರೈತರ ಮನವಿಯನ್ನು ಸ್ವೀಕರಿಸಿ ನೇರವಾಗಿ ಕೆಡಿಪಿ ಸಭೆಗೆ ತೆರಳಿದರು. ಕಾರ್ಯಕರ್ತರ ಮನವಿ ಸ್ವೀಕರಿಸದ ಹಿನ್ನೆಲೆ ಬಜರಂಗದಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಘೇರಾವ್ ಹಾಕಲು ಕಾರಣವಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.