ಮಂಡ್ಯ ತಾಲೂಕಿನ ಕೋಡಿದೊಡ್ಡಿಯಲ್ಲಿ ಅಭಿಮಾನಿ ರಾಮಕೃಷ್ಣ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
undefined
ರಾಮಕೃಷ್ಣ(24) ಎನ್ನುವ ಅಭಿಮಾನಿ ತನ್ನ ಅಂತ್ಯ ಸಂಸ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕೆಂದು ಬರೆದಿಟ್ಟಿದ್ದ
undefined
ಅದರಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಗುರುವಾರ) ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿ ರಾಮಕೃಷ್ಣ ಅಂತಿಮ ದರ್ಶನ ಪಡೆದರು.
undefined
ಮೂಲಕ ಸಿದ್ದರಾಮಯ್ಯ ಅವರು ಅಭಿಮಾನಿಯ ಕೊನೆ ಆಸೆಯನ್ನು ಈಡೇರಿಸಿದರು.
undefined
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಿಕ್ಕವಯಸ್ಸಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಬಹಳ ದೀರ್ಘಕಾಲ ಬಾಳಿ ಬದುಕಬೇಕಾದ ವ್ಯಕ್ತಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಆತ್ಮಹತ್ಯೆ ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ. ಎಷ್ಟೇ ಸಮಸ್ಯೆ ಇದ್ರು ಎದುರಿಸಬೇಕು. ಯಾರು ಕೂಡ ಆತ್ಮಹತ್ಯೆ ಮಾಡಿಕೊಳ್ಳವಂತ ದೃಢ ನಿರ್ಧಾರ ತೆಗೆದುಕೊಳ್ಳಬೇಡಿ ಎಂಬುದಾಗಿ ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.
undefined
ಸಿದ್ದರಾಮಯ್ಯನವರ ಅಭಿಮಾನಿ ರಾಮಕೃಷ್ಣ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಇದು
undefined