ರಾಷ್ಟ್ರೀಯ ಮಟ್ಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರಂತಹವರು ಪಕ್ಷವನ್ನು ಬೆಳೆಸುತ್ತಿದ್ದಾರೆ. ಇವರ ಹಿಂದೆ ಲಕ್ಷಾಂತರ ಕಾರ್ಯಕರ್ತರ ಪರಿಶ್ರಮ ಇದೆ. ಸದೃಢ ಸಮಾಜವನ್ನು ನಿರ್ಮಿಸಲಾಗುತ್ತಿದೆ. ಕಾಂಗ್ರೆಸ್(Congress) ನಾಯಕರು ನಮ್ಮ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡು ಬಿಜೆಪಿಗೆ ಬರುತ್ತಿರುವುದೇ ಇದರ ಸಂಕೇತವಾಗಿದೆ. ಪಕ್ಷವು ಮೊದಲಿನಿಂದಲೂ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿಕೊಂಡು ಬಂದಿದೆ. ಇಲ್ಲಿ ಯಾವುದೇ ಜಾತಿಯ ತಾರತಮ್ಯವಿಲ್ಲ. ಪಕ್ಷವನ್ನು ರಾಜ್ಯ ಮತ್ತು ದೇಶದ ಮೂಲೆ ಮೂಲೆಗೂ ಕೊಂಡೊಯ್ಯಬೇಕು ಎನ್ನುವುದೇ ಪಕ್ಷದೊಳಗಿನ ತುಡಿತವಾಗಿದೆ. ಇಲ್ಲಿ ಎಲ್ಲರಿಗೂ ತಕ್ಕ ಮನ್ನಣೆ ಕೊಡುವ ವ್ಯವಸ್ಥೆ ಇದೆ ಎಂದು ತಿಳಿಸಿದರು. ಪಕ್ಷದ ಮುಖಂಡರಾದ ನಾರಾಯಣಗೌಡ, ಗಂಗಹನುಮಯ್ಯ, ಕಾವೇರಿ ಕೇದಾರನಾಥ ಇತರರು ಉಪಸ್ಥಿತರಿದ್ದರು.