ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆನೀಡುವ ಸುದ್ದಿಗಳ ನಡುವೆಯೇ, ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಉಲ್ಲೇಖಿಸಿ, ರಾಜೀನಾಮೆ ಕುರಿತು ನಾಳೆ ಮಾತನಾಡುವುದಾಗಿ ತಿಳಿಸಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿಗಳ ಬೆನ್ನಲ್ಲೇ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಮೂರು ವರ್ಷ ಆಡಳಿತದ ಬಗ್ಗೆ ಬರೆದುಕೊಂಡಿದ್ದಾರೆ. ಈ ಮೂಲಕ ರಾಜೀನಾಮೆ ಬಗ್ಗೆ ಪರೋಕ್ಷವಾಗಿ ಸಂದೇಶ ನೀಡಿದ್ರಾ ಅನ್ನೋ ಚರ್ಚೆಗಳು ನಡೆಯಲಾರಂಭಿಸಿವೆ.
24
ಸಿದ್ದರಾಮಯ್ಯ ಟ್ವೀಟ್
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.
34
ಸಿದ್ದರಾಮಯ್ಯ ಟ್ವೀಟ್
ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗಿದ್ದ ದಿವಂಗತ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀನಾಮೆ ವಿಷಯದ ಕುರಿತು ನಾಳ ಮಾತನಾಡುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.