ಮೊದಲ ಬಾರಿಗೆ ರಾಜ್ಯಕ್ಕೆ ಉಸ್ತುವಾರಿ: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

First Published | Dec 4, 2020, 4:26 PM IST

ಬಿಜೆಪಿ ರಾಜ್ಯ ಉಸ್ತುವಾರಿಯಾದ ಬಳಿಕ ಇಂದು (ಶುಕ್ರವಾರ) ಮೊದಲ ಬಾರಿಗೆ ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ ನೀಡಲಿದ್ದು, ಗೋವಾ ವಿಮಾನ ನಿಲ್ದಾಣದಲ್ಲಿ ಅವರನ್ನ ಶಾಸಕ ಅನಿಲ್‌ ಬೆನಕೆ, ರಾಜ್ಯ ಸಭಾ ಸಂಸದರಾದ ಈರಣ್ಣ ಕಡಾಡಿ, ಪಕ್ಷದ ಪದಾಧಿಕಾರಿಗಳು ಸ್ವಾಗತಿಸಿದರು. ಮತ್ತೊಂದೆಡೆ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಮಿಸುತ್ತಿದ್ದರಿಂದ ಕರ್ನಾಟಕ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ‌ ಹಾಗೂ ರಾಜ್ಯ ಉಸ್ತುವಾರಿಗಳಾದ ಅರುಣ್‌ ಸಿಂಗ್ ಅವರು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೋವಾ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲಾಯಿತು.
ಅವರನ್ನ ಶಾಸಕ ಅನಿಲ್‌ ಬೆನಕೆ, ರಾಜ್ಯ ಸಭಾ ಸಂಸದರಾದ ಈರಣ್ಣ ಕಡಾಡಿ, ಪಕ್ಷದ ಪದಾಧಿಕಾರಿಗಳು ಸ್ವಾಗತಿಸಿದರು.
Tap to resize

ಇಂದು (ಶುಕ್ರವಾರ) ಸಂಜೆ ಮೂರು ದಿನಗಳ ರಾಜ್ಯ ಭೇಟಿಗಾಗಿ ಗೋವಾದಿಂದ ಬೆಳಗಾವಿಗೆ ಆಗಮಿಸಲಿರುವ ಅರುಣ್ ಸಿಂಗ್
ಇಂದು ಬೆಳಗಾವಿಯಲ್ಲಿ ಮೂರು ಸಭೆಗಳಲ್ಲಿ ಪಾಲ್ಗೊಳ್ಳಲಿರುವ ಅರುಣ್ ಸಿಂಗ್, ಸಂಜೆ 5.30ಕ್ಕೆ ಬಿಜೆಪಿ ವಿಭಾಗ ಉಸ್ತುವಾರಿಗಳು ಮತ್ತು ವಿಭಾಗ ಸಂಘಟನಾ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಲಿದ್ದು, ಬಳಿಕ ರಾತ್ರಿ 7.30ಕ್ಕೆ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದೆ.
ನಾಳೆ (ಶನಿವಾರ) ರಾಜ್ಯ ಕಾರ್ಯಕಾರಿಣಿ ಮುಗಿಸಿ ಅಂದು ರಾತ್ರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಭಾನುವಾರ ಬೆಳಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜೊತೆಗೆ ಉಪಹಾರದಲ್ಲಿ ಅರುಣ್ ಸಿಂಗ್ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಳಗಾವಿಯಲ್ಲಿ ಶುಕ್ರವಾರ ಸಂಜೆ ಕೋರ್‌ ಕಮಿಟಿ ಸಭೆ ನಡೆಯಲಿದೆ. ಶನಿವಾರ ನಡೆಯುವ ಕಾರ್ಯಕಾರಿಣಿಯಲ್ಲೂ ಕೆಲ ಶಾಸಕರು ಸಂಪುಟ ವಿಸ್ತರಣೆ ಬಗ್ಗೆ ಪ್ರಸ್ತಾಪಿಸಬಹುದು. ಕಾರ್ಯಕಾರಿಣಿ ಮುಗಿದ ಬಳಿಕ ಅರುಣ್‌ ಸಿಂಗ್‌ ಜತೆಯಲ್ಲೇ ಸಿಎಂ ಯಡಿಯೂರಪ್ಪ ಬೆಂಗಳೂರಿಗೆ ಆಗಮಿಸುತ್ತಾರೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಪ್ರಸ್ತಾಪಿಸಿ ವರಿಷ್ಠರ ಒಪ್ಪಿಗೆಗೆ ಒತ್ತಾಯಿಸಬಹುದು.
ವರಿಷ್ಠರ ಒಪ್ಪಿಗೆ ದೊರೆತರೆ ಭಾನುವಾರವೇ ಐವರಿಗೆ ‘ಮಂತ್ರಿ ಭಾಗ್ಯ’ ಲಭಿಸಬಹುದೆಂಬ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಭೇಟಿ ಹಿನ್ನೆಲೆಯಲ್ಲಿರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಳು ಗರಿಗೆದರಿವೆ.

Latest Videos

click me!