ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಬೆಳಗಾವಿಯಲ್ಲಿ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಆಕ್ಟೀವ್ ಆಗಿದ್ದಾರೆ.
ಸೋಮವಾರ ಬೆಳಗಾವಿ ತಾಲೂಕಿನ ರಾಜಹಂಸಗಡ ಗ್ರಾಮಕ್ಕೆ ಭೇಟಿ ನೀಡಿದ್ದ ಶ್ರದ್ಧಾ, ರಾಜಹಂಸಗಡ ಗ್ರಾಮಸ್ಥರ ಭೇಟಿಯಾಗಿ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.
ಅಲ್ಲದೇ ಐತಿಹಾಸಿಕ ರಾಜಹಂಸಗಡ ಕೋಟೆಗೂ ಭೇಟಿ ನೀಡಿ ಇಲ್ಲಿರುವ ಸಿದ್ದೇಶ್ವರ ದೇಗುದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಸುರೇಶ ಅಂಗಡಿ ಅವರ ಕಿರಿಯ ಪುತ್ರಿ ಹಾಗೂ ಜಗದೀಶ ಶೆಟ್ಟರ್ ಅವರ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ ಬೆಳಗಾವಿ ಎಪಿಎಂಸಿ ಆವರಣದಲ್ಲಿ ಡಿಸೆಂಬರ್ 25ರಂದು ಬಿಜೆಪಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದರು.
ಇದೀಗ ಅಮಿತ್ ಶಾ ಅವರು ಸುರೇಶ್ ಅಂಗಡಿನಿವಾಸಕ್ಕೆ ಭೇಟಿ ನೀಡಿ ಕುಟುಂಸ್ಥರಿಗೆ ಸಂತ್ವಾನ ಹೇಳಿದ್ದರು.
ಮನೆಗೆ ಅಮಿತ್ ಶಾ ಬಂದು ಹೋದ ಬಳಿಕಶ್ರದ್ಧಾ ಬಹಿರಂಗವಾಗಿ ಓಡಾಡುತ್ತಿರುವುದು ನೋಡಿದ್ರೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ಸಿಗುವ ಲಕ್ಷಣಗಳು ಕಾಣುತ್ತಿವೆ.
ಶಾ ಮನೆ ಬಂದಿರುವ ಸಮಯದಲ್ಲಿ ಜಗದೀಶ್ ಶೆಟ್ಟರ್ ಮೂಲಕ ಟಿಕೆಟ್ ಸುಳಿವು ನೀಡಿದ್ದರಿಂದ ಶ್ರದ್ಧಾ ಅವರು ಆಕ್ಟೀವ್ ಆಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.