ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತಿಮವಾಗಿ ಕೆಲವು ಹೆಸರುಗಳನ್ನು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು (ಮಾ.13): ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತಿಮವಾಗಿ ಕೆಲವು ಹೆಸರುಗಳನ್ನು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
24
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮಕ್ಷಮದಲ್ಲಿ ಚರ್ಚೆಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಯಲ್ಲೇ ಇದ್ದಾರೆ ಎಂದರು.
34
ಹಾಲಿ ಸಂಸದರ ಪೈಕಿ ಕೆಲವರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ಬಗ್ಗೆ ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದರು. ಎಷ್ಟು ಹಂತಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂಬ ಪ್ರಶ್ನೆಗೆ, ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.
44
ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ಜೆಡಿಎಸ್ ಜತೆಗೆ ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಜೆಡಿಎಸ್‌ಗೆ ಎಷ್ಟು ಸ್ಥಾನ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ದೆಹಲ್ಲಿ ಚರ್ಚೆಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.