Assembly election: 2023ರ ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

First Published Dec 19, 2022, 3:09 PM IST

ಬೆಂಗಳೂರು (ಡಿ.19): 2023ನೇ ಸಾಲಿನ ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ 93 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. 

ಈಗ ಮೊದಲ ಹಂತದಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಬೆಂಗಳೂರಿನಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇನ್ನು ಈ ಎಲ್ಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಅನುಮತಿಯನ್ನೂ ಪಡೆಯಲಾಗಿದೆ ಎಂದು ಹೇಳಿದರು.

Mandya: ಡಿ.24ಕ್ಕೆ ಮೇಲುಕೋಟೆಗೆ ಪಂಚರತ್ನ ರಥಯಾತ್ರೆ: ಶಾಸಕ ಸಿ.ಎಸ್‌.ಪುಟ್ಟರಾಜು

ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಫಿಕ್ಸ್: ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆಯ ವೇಳೆ ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದು ನಂತರ, ರಾಮನಗರ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿ ಗೆಲ್ಲಿಸಿದ್ದರು. ಆದರೆ, ಈ ಬಾರಿ ಅನಿತಾ ಕುಮಾರಸ್ವಾಮಿ ಅವರು ತನ್ನ ಮಗನಿಗೆ ಕ್ಷೇತ್ರ ತ್ಯಾಗ ಮಾಡುವುದಾಗಿ ತಿಳಿಸಿದ್ದರು. ಅದರಂತೆ ಈಗ ನಿಖಿಲ್‌ ಕುಮಾರಸ್ವಾಮಿ ಅವರಿಗೆ ರಾಮನಗರ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಭವಾನಿ ರೇವಣ್ಣ ಟಿಕೆ‌ಟ್‌ಗೆ ಕೋಕ್:
ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಹಾಸನ ಜಿಲ್ಲೆಯಿಂದ ಸ್ಪರ್ಧಿಸುವ ಪ್ರಭಲ ಆಕಾಂಕ್ಷಿಯಾಗಿದದ ಭವಾನಿ ರೇವಣ್ಣ ಅವರ ಟಿಕೆಟ್‌ಗೆ ಕೊಕ್ಕೆ ಹಾಕಿದ್ದಾರಾ ಎಂಬ ಅನುಮಾನ ಮೂಡಿಬಂದಿದೆ. ಹೀಗಾಗಿ, ಭವಾನಿ ರೇವಣ್ಣ ಟಿಕೆಟ್ ಘೋಷಣೆಯಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಅವರಿಗೆ ಟಿಕೆಟ್ ಸಿಗೋದು 50:50 ಸಾಧ್ಯತೆ ಇದೆ ಅನುಮಾನ  ವ್ಯಕ್ತವಾಗುತ್ತಿದೆ. 

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರಿಗೆ ಸಾಲದಿಂದ ಮುಕ್ತಿ: ಸಿ.ಎಂ.ಇಬ್ರಾಹಿಂ

ಹಾಸನ ಟಿಕೆಟ್‌ ಮುಟ್ಟದ ಎಚ್‌ಡಿಕೆ: ಇನ್ನು ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರಗಳ ಟಿಕೆಟ್‌ಗಳನ್ನು ಟಚ್‌ ಮಾಡಿಲ್ಲ. ಹೆಚ್.ಡಿ.ರೇವಣ್ಣ ಪವರ್ ಸೆಂಟರ್ ಹಾಸನ ಜಿಲ್ಲೆಗೆ ಕೈ ಹಾಕದ ಎಚ್.ಡಿ. ಕುಮಾರಸ್ವಾಮಿ ಅವರು ಮೊದಲ ಪಟ್ಟಿಯಲ್ಲಿ ಹಾಸನದ ಯಾವ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಹಾಸನ‌ ಜಿಲ್ಲೆಯ ಶ್ರವಣಬೆಳಗೊಳ, ಬೇಲೂರು, ಅರಸೀಕೆರೆ, ಹೊಳೆನರಸೀಪುರ, ಸಕಲೇಶಪುರ, ಅರಕಲಗೂಡು ಯಾವ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಆಗಿಲ್ಲ. 

ಶಿರಾ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಪೆಂಡಿಂಗ್: ಶಿರಾ ಕ್ಷೇತ್ರದ ಬಗ್ಗೆಯೂ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಪೆಂಡಿಂಗ್ ಇಡಲಾಗಿದೆ. ಶಿರಾದಲ್ಲಿ ಜೆಡಿಎಸ್ ನಿಂದ ಐವರು ಆಕಾಂಕ್ಷಿಗಳು ಇರುವ ಹಿನ್ನೆಲೆಯಲ್ಲಿ ಭಿನ್ನಮತ ಮೂಡುವ ಆತಂಕ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಕಾದು ನೋಡುವ ತಂತ್ರಕ್ಕೆ ಮುಂದಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ 93 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ರಾಜ್ಯದಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು.

ಈಗ ಮೊದಲ ಹಂತದಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಬೆಂಗಳೂರಿನಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನು ಈ ಎಲ್ಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಅನುಮತಿಯನ್ನೂ ಪಡೆಯಲಾಗಿದೆ ಎಂದು ಹೇಳಿದರು.

click me!