ನಿಯಮ ಉಲ್ಲಂಘಿಸಿ ದೇವಸ್ಥಾನಕ್ಕೆ ಸಚಿವ ಭೇಟಿ, ಫೋಟೋ ಹರಿಬಿಟ್ಟ ಬಿಜೆಪಿ ಶಾಸಕಗೆ ಕ್ಲಾಸ್

First Published | Jun 5, 2021, 5:35 PM IST

ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಯಾವುದೇ ದೇವಸ್ಥಾನ ತೆಗೆಯದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದ್ರೆ, ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನ ಬಿಜೆಪಿ ಶಾಸಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತವಾಗಿವೆ.

ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಬಿ.ವೈ. ವಿಜಯೇಂದ್ರ ಪೂಜೆ ಸಲ್ಲಿಸಿದ್ದರು. ಇದೀಗ ಸಚಿವ ಅರವಿಂದ ಲಿಂಬಾವಳಿ ಸರದಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ ನೀಡಿದ್ದಾರೆ.
Tap to resize

ಅರವಿಂದ ಲಿಂಬಾವಳಿ ದೇವಸ್ಥಾನ ಭೇಟಿಯ ಫೋಟೋ ಪೋಸ್ಟ್ ಮಾಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ
ಮಂದಿರ-ಮಠ ಪ್ರವೇಶ ನಿಷಿದ್ದವಾದ್ರೂ ದೇವರ ದರ್ಶನ ಪಡೆದ ಬಗ್ಗೆ ವಿರೋಧ
ಹರೀಶ್ ಪೂಂಜಾ ಪೋಸ್ಟ್ ಗೆ ಕೆಲವರಿಂದ ಅಸಮಾಧಾನ ವ್ಯಕ್ತವಾಗಿದ್ದು, ನಿಯಮ ಉಲ್ಲಂಘಿಸಿ ದೇವರ ದರ್ಶನ ಪಡೆದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ,
ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ತಮ್ಮ ಪೋಸ್ಟ್‌ನ್ನು ಎಡಿಟ್ ಮಾಡಿದ ಹರೀಶ್ ಪೂಂಜಾ, ಕೋವಿಡ್ ನಿಯಮಗಳನ್ನ ನಿಯಮಗಳ ಪ್ರಕಾರ ದೇವಸ್ಥಾನಕ್ಕೆ ಹೋಗಿಲ್ಲ, ಹೊರಗಿನಿಂದ ದರ್ಶನ ಪಡೆಯಲಾಗಿದೆ ಎಂದು ಸಬೂಬು ಹೇಳಿದ್ದಾರೆ.

Latest Videos

click me!