ಹಾವೇರಿ ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಹಾನಗಲ್ಲ ಪಟ್ಟಣದ ಮತಗಟ್ಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು.
ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರುಗುಂಟಾದಲ್ಲಿ ಕುಟುಂಬಸ್ಥರೊಂದಿಗೆ ಆಗಮಿಸಿ ಮತದಾನ ಮಾಡಿದ್ದಾರೆ.
ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ. ಉಮೇಶ್ ಜಾಧವ್ ಅವರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಮತದಾನ ಮಾಡಿದ್ದಾರೆ.
ಬೆಳಗಾವಿಯ ನಗರದ ಹಿಂಡಲಗಾ ಸಮೀಪ ವಿಜಯನಗರ ಕನ್ನಡ- ಮರಾಠಿ ಶಾಲೆ ಮತಗಟ್ಟೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಕೂಡ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಬೆಲಗಾವಿ ಜಿಲ್ಲೆಯ ಖಾನಾಪುರದಲ್ಲಿ ಮತದಾನ ಮಾಡಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.
ಶಿವಮೊಗ್ಗ ಬಿಜೆಪಿ ಬಿ.ವೈ.ರಾಘವೇಂದ್ರ ಅವರು ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ರಾಘವೇಂದ್ರ ಜತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕುಟುಂಬದ ಸದಸ್ಯರೆಲ್ಲರೂ ಮತ ಚಲಾಯಿಸಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಜಿಲ್ಲೆಯ ಕುಷ್ಟಗಿ ಪಟ್ಟಣದ ವಿದ್ಯಾನಗರ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ತಂದೆ ಮಾಜಿ ಶಾಸಕ ಕೆ.ಶರಣಪ್ಪ ಸೇರಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ್ದಾರೆ.