ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಾವು ಜೆಡಿಎಸ್‌ಗೆ ಹೋಗುವ ವದಂತಿಗಳನ್ನು ತಳ್ಳಿಹಾಕಿದ್ದು, ಬಿಜೆಪಿಯನ್ನೇ ರಿಪೇರಿ ಮಾಡುವುದಾಗಿ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿಯಿಂದಲೇ ಗೆಲುವು ಸಾಧ್ಯವಾಯಿತು ಎಂದರು.
ಬಂಡಾಯ ಶಾಸಕರಿಗೆ ಜೆಡಿಎಸ್‌ನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು.
25
ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು ಶಕ್ತಿ
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು ಶಕ್ತಿ ಇದೆ. ಬಿಜೆಪಿಯ ಒಂದು ಶಕ್ತಿ, ಕುಮಾರಸ್ವಾಮಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕೆ ನಮಗೆ ತುಮಕೂರು ಗೆಲುವಾಗಿದೆ.
35
ಗೆಲುವಿಗೆ ಜೆಡಿಎಸ್ ಸಹಕಾರ
ಮೈಸೂರು, ಕೋಲಾರ ಬೆಂಗಳೂರು ಗ್ರಾಮಾಂತರ ಹಾಗೂ ಚಿತ್ರದುರ್ಗಗಳನ್ನೂ ಗೆಲ್ಲೋಕೆ ಆಗಿದೆ ಎಂದ ಅವರು, ಇದಕ್ಕೆ ನೇರವಾಗಿ ಕುಮಾರಸ್ವಾಮಿ ಹಾಗೂ ದೇವಗೌಡರ ಸಹಕಾರವಿದೆ ಎಂದರು.
ಕುಮಾರಸ್ವಾಮಿ ಅವರಿಗೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು, ಸರ್ಕಾರ ಮಾಡಬೇಕಂತಿದೆ. ನಾವು ಯಾವ ಕಾಲಕ್ಕೂ ಜೆಡಿಎಸ್ ಗೆ ಹೋಗೋದಿಲ್ಲ ಇದು ನನ್ನ ವೈಯಕ್ತಿಕ ಹೇಳಿಕೆ. ನಾನಾಗಲೀ ರಮೇಶ್ ಜಾರಕಿಹೊಳಿ ಆಗಲೀ, ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪೂಜ್ಯ ತಂದೆ ಯಡಿಯೂರಪ್ಪ ಅವರದ್ದು ಜೆಡಿಎಸ್‌ಗೆ ದೂರ ಸರಿಸಬೇಕು ಅನ್ನೋದಿದೆ ಎಂದು ವ್ಯಂಗ್ಯವಾಡಿದ ಅವರು, ಆದರೆ, ಮೋದಿ-ಅಮಿತ್ ಶಾ ಇದಕ್ಕೆ ಒಪ್ಪುವುದಿಲ್ಲ. ಈ ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಆಗುತ್ತದೆ. ಇಲ್ಲಾ ಅಂದರೆ ಜೆಡಿಎಸ್- ಜೆಸಿಬಿ ಮೈತ್ರಿ ಸರ್ಕಾರ ಆಗುತ್ತೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.