ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.
12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್ಲೈನ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.
ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು
ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.
ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.