ಲೈಂಗಿಕ ಆರೋಗ್ಯ ಪ್ರತಿಯೊಬ್ಬರಿಗೂ ಅತ್ಯಗತ್ಯ. 'ಸೆಕ್ಸ್‌ನಲ್ಲಿ ಸಕ್ರಿಯವಾಗಿ, ನಿಯಮಿತವಾಗಿ, ಒಳ್ಳೆ ಮನಸ್ಸಿನಿಂದ ಭಾಗಿಯಾದರೆ ಹೃದ್ರೋಗವೇ ಬರುವುದಿಲ್ಲ,' ಎಂದು ಸಂಶೋಧನೆಯೊಂದು ದೃಢಪಡಿಸಿದೆ. ಅದರಲ್ಲಿಯೂ ಈಗಿನ ಒತ್ತಡದ ಬದುಕಿನಲ್ಲಿ ಖಿನ್ನತೆ ಎಲ್ಲರನ್ನೂ ಕಾಡುತ್ತದೆ. ಆದರೆ, ಆಗಾಗ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದರಿಂದ ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಹಾರ್ಮೋನ್‌ಗಳು ಸೂಕ್ತ ಪ್ರಮಾಣದಲ್ಲಿ ಉತ್ಪತ್ತಿಯಾಗಿ, ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಲೂ ನೆರವಾಗುತ್ತದೆ.