ಭಾರತದ ಮೊದಲ ಟ್ರಾನ್ಸ್‌ಮ್ಯಾನ್ ತಂದೆಯಾಗಿ ತ್ಮ ಮಗುವಿನ ನಾಮಕರಣ ಮಾಡಿದ್ದಾರೆ. ಕೇರಳದ ಕೋಝಿಕ್ಕೋಡ್‌ನ ಉಮ್ಮಲತ್ತೂರ್‌ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹ್ಹಾದ್ ಕೆಲ ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದು ಇದೀಗ ದಂಪತಿ ಮಗುವಿಗೆ ನಾಮಕರಣ ಮಾಡಿದ್ದಾರೆ.
ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಜಹ್ಹಾದ್ ಗೆ ಕಳೆದ ಫೆಬ್ರವರಿ 2ರಂದು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಅಂದು ಮಗುವಿನ ಲಿಂಗ ಗುರುತನ್ನು ಬಹಿರಂಗಪಡಿಸಲು ದಂಪತಿ ನಿರಾಕರಿಸಿದ್ದರು. ಈಗ ತಮಗೆ ಹುಟ್ಟಿರುವುದು ಹೆಣ್ಣು ಮಗುವೆಂದು ಹೇಳಿಕೊಂಡಿದ್ದಾರೆ. ದಂಪತಿ ಇದೀಗ ಮಗುವಿಗೆ ಜಬಿಯಾ ಸಹದ್ ನಾಮಕರಣ ಮಾಡಿದ್ದಾರೆ.
ಈ ಹಿಂದೆಯೇ ದಂಪತಿ ಮಗುವನ್ನು ದತ್ತು ಪಡೆಯಲು ಪ್ರಯತ್ನಿಸಿದ್ದರು. ಆದರೆ, ದಂಪತಿ ಟ್ರಾನ್ಸ್‌ಜೆಂಡರ್ ಆಗಿರುವ ಕಾರಣ ಕಾನೂನು ಪ್ರಕ್ರಿಯೆಯು ಸವಾಲಾಗಿತ್ತು. ಹೀಗಿದ್ದೂ ಸಹದ್‌ಗೆ ಗಂಡಾಗಿದ್ದರೂ ಗರ್ಭಿಣಿಯಾಗುವ ಯೋಚನೆ ಬಂದಿತ್ತು.
'ಜನರು ಏನು ಹೇಳುತ್ತಾರೋ ಎಂಬ ಆತಂಕದಲ್ಲಿ ಆರಂಭದಲ್ಲಿ ಹಿಂಜರಿಯುತ್ತಿದ್ದೆ. ಅಲ್ಲದೆ ಒಮ್ಮೆ ಕೈಬಿಟ್ಟ ಸ್ತ್ರೀತ್ವಕ್ಕೆ ಮರಳುವುದು ಒಂದು ಸವಾಲಾಗಿ ಪರಿಣಮಿಸಿತು. ಆದರೆ ಜಿಯಾಳ ಪ್ರೀತಿ ಮತ್ತು ತಾಯಿಯಾಗಬೇಕೆಂಬ ಅದಮ್ಯ ಬಯಕೆ ನಿರ್ಧಾರವನ್ನೇ ಬದಲಿಸಿತು' ಎಂದು ಸಹದ್ ಹೇಳಿದ್ದರು.
ಕೋಝಿಕ್ಕೋಡ್ ಮೆಡಿಕಲ್ ಕಾಲೇಜಿನ ವೈದ್ಯರ ಮಾರ್ಗದರ್ಶನದಲ್ಲಿ ತಜ್ಞ ಪರೀಕ್ಷೆಗಳನ್ನು ನಡೆಸಿ ಆರೋಗ್ಯ ಸಮಸ್ಯೆ ಇಲ್ಲ ಎಂದು ಖಚಿತಪಡಿಸಿಕೊಂಡ ನಂತರ ದಂಪತಿಗೆ ಚಿಕಿತ್ಸೆ ಆರಂಭಿಸಲಾಯಿತು. ಸಹದ್ ಹೆಣ್ಣಿನಿಂದ ಗಂಡಾಗಿ ಪರಿವರ್ತನೆಯ ಭಾಗವಾಗಿ, ಸ್ತನಗಳನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಲಾಯಿತು. ಆದರೆ ಗರ್ಭಾಶಯ ಇತ್ಯಾದಿಗಳನ್ನು ಬದಲಾಯಿಸಲಾಗಿಲ್ಲ.
Pregnant transman
ಹಾಲಿನ ಬ್ಯಾಂಕ್ ಮೂಲಕ ಮಗುವಿಗೆ ಹಾಲುಣಿಸಲು ದಂಪತಿ ನಿರ್ಧರಿಸಿದ್ದಾರೆ. ಜಿಯಾ ಓರ್ವ ನರ್ತಕಿಯಾಗಿದ್ದು ಜಹ್ಹಾದ್ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿದ್ದಾರೆ.