ತುಮಕೂರು (ಜು.31): ಮನೆ ಮಗಳು ದೂರದ ಸಿಟಿಯಲ್ಲಿ ಓದುತ್ತಿದ್ದಾಳೆ ಎಂದು ಫೊನ್ ಪೇ, ಗೂಗಲ್ ಪೇ ಮೂಲಕ ಹೆಣ್ಣು ಮಕ್ಕಳಿಗೆ ಹಣ ಹಾಕಿಸೋ ಮುನ್ನಾ ಎಚ್ಚರ. ಹಣವನ್ನು ಕಳಿಸಲು ಮಗಳ ಮೊಬೈಲ್ ನಂಬರ್ ಕೊಟ್ಟು ಹಣ ಹಾಕಿಸಿದ ತಪ್ಪಿಗೆ, ಇದೀಗ ಅಪ್ಪನೇ ಮಗಳನ್ನು ಶಾಶ್ವತವಾಗಿ ಕಳೆದುಕೊಂಡು ಕಣ್ಣೀರು ಹಾಕಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಗ್ಯಾರಹಳ್ಳಿಯಲ್ಲಿ ಮನಕಲಕುವ ಘಟನೆ ನಡೆದಿದೆ. ವಿವಾಹಿತನ ಕಿರುಕುಳಕ್ಕೆ ಬೇಸತ್ತು ಯುವತಿ ಭಾವನಾ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ನೆಲಮಂಗಲದ ಚಿಕ್ಕಮ್ಮನ ಮನೆಯಲ್ಲಿ ಭಾವನ (22) ನೇಣು ಬಿಗಿದುಕೊಂಡಿದ್ದಾಳೆ. ಇದೇ ಗ್ರಾಮದ ವಿವಾಹಿತ ನವೀನ್ ಎಂಬಾತನ ಕಿರುಕುಳಕ್ಕೆ ಬೇಸತ್ತು ಮಗಳು ಸಾವಿಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಗುಬ್ಬಿ ತಾಲೂಕಿನ ಗ್ಯಾರಹಳ್ಳಿ ಗ್ರಾಮದ ಭಾವನಾ, ಮೈಸೂರಿನಲ್ಲಿ ನರ್ಸಿಂಗ್ ಮಾಡುತ್ತಿದ್ದಳು.