ಭಾರತದಿಂದ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ್ ಮಲ್ಯ ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಜೊತೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ.
2023ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಸಿದ್ಧಾರ್ಥ್ ಮಲ್ಯ ಸರಿಸುಮಾರು ಒಂದು ವರ್ಷದ ಬಳಿಕ ಇದೀಗ ಜಾಸ್ಮಿನ್ ಜೊತೆ ವೈವಾಹಿಕ ಜೀವನ ಆರಂಭಿಸಿದ್ದಾರೆ.
ಲಂಡನ್‌ನಲ್ಲಿ ನಡೆದ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಸಿದ್ಧಾರ್ಥ್ ಮಲ್ಯ ಹಾಗೂ ಜಾಸ್ಮಿನ್ ಸತಿ-ಪತಿಗಳಾಗಿದ್ದಾರೆ. ಕಳೆದ 15 ದಿನಗಳಿಂದ ಮಲ್ಯ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು.
ಸಿದ್ದಾರ್ಥ್ ಮಲ್ಯ-ಜಾಸ್ಮಿನ್ ಮದುವೆ ಸಮಾರಂಭಕ್ಕೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ಈ ಜೋಡಿ ಶೀಘ್ರದಲ್ಲೇ ಹನಿಮೂನ್ ಪ್ರವಾಸ ಕೈಗೊಳ್ಳಲಿದೆ ಅನ್ನೋ ಮಾಹಿತಿ ಬಯಲಾಗಿದೆ.
ಸಿದ್ದಾರ್ಥ್ ಮಲ್ಯ ಲಂಡನ್ ಸೇರಿಕೊಂಡ ಬಳಿಕ ಆರೋಗ್ಯ ಸೇರಿದಂತೆ ಹಲವು ಸಂಕಷ್ಟಕ್ಕೆ ಸಿಲುಕಿದ್ದರು. ಈ ವೇಳೆ ಜೊತೆಯಾದ ಜಾಸ್ಮಿನ್ ಸಿದ್ಧಾರ್ಥ್ ಮಲ್ಯ ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಳು.
2023ರ ಆರಂಭದಲ್ಲಿ ಸಿದ್ದಾರ್ಥ್ ಮಲ್ಯ ಕ್ಯಾಲಿಫೋರ್ನಿಯಾದಲ್ಲಿನ ಹ್ಯಾಲೋವಿನ್ ಪಾರ್ಟಿಯಲ್ಲಿ ಜಾಸ್ಮಿನ್ ಬಳಿ ತಮ್ಮ ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಅತ್ತ ಜಾಸ್ಮಿನ್ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಳು.
ಉದ್ಯಮಿ ವಿಜಯ್ ಮಲ್ಯ ಪುತ್ರ ಭಾರತದಲ್ಲಿರುವಾಗ ಪ್ರಮುಖವಾಗಿ ನಟಿ ದೀಪಿಕಾ ಪಡುಕೋಣೆ ಜೊತೆಗಿನ ಡೇಟಿಂಗ್ ಭಾರಿ ಸದ್ದು ಮಾಡಿತ್ತು. ಆದರೆ ಅಷ್ಟೇ ವೇಗದಲ್ಲಿ ಈ ಸಂಬಂಧ ಮುರಿದುಬಿದ್ದಿತ್ತು. ಬ್ರೇಕ್ ಅಪ್ ಬಳಿಕ ಇವರಿಬ್ಬರು ಹಲವು ಆರೋಪಗಳನ್ನು ಮಾಡಿದ್ದರು.
ಭಾರತದ ಬ್ಯಾಂಕ್‌ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿರುವ ಆರೋಪ ಹೊತ್ತಿರುವ ಉದ್ಯಮಿ ವಿಜಯ್ ಮಲ್ಯ ಲಂಡನ್‌ಗೆ ಪರಾರಿಯಾಗಿದ್ದಾರೆ. ಈ ಕುರಿತು ಕಾನೂನು ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿದೆ.