Yuzvendra Chahal: ಕ್ರಿಕೆಟಿಗ ಯುಜ್ವೇಂದ್ರ ಚಾಹಲ್, ಧನಶ್ರೀ ವರ್ಮಾರಿಂದ ವಿಚ್ಛೇದನ ಪಡೆದ ನಂತರ ಆರ್‌ಜೆ ಮಹಾವಶ್ ಜೊತೆಗಿನ ಸ್ನೇಹದಿಂದ ಸುದ್ದಿಯಲ್ಲಿದ್ದರು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳ ನಡುವೆಯೇ, ಇದೀಗ ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ.
ಟೀಮ್ ಇಂಡಿಯಾ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ತಮ್ಮ ಬೌಲಿಂಗ್‌ನಿಂದ ಫೇಮಸ್. ಇದರ ಜೊತೆಗೆ, ಅವರು ತಮ್ಮ ವೈಯಕ್ತಿಕ ಜೀವನದಿಂದಲೂ ಸುದ್ದಿಯಲ್ಲಿದ್ದಾರೆ.
26
ಯುಜ್ವೇಂದ್ರ ಚಾಹಲ್ 2020 ರಲ್ಲಿ ಕೊರಿಯೋಗ್ರಾಫರ್ ಮತ್ತು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಧನಶ್ರೀ ವರ್ಮಾ ಅವರನ್ನು ವಿವಾಹವಾದರು. 2025ರಲ್ಲಿ ಆಕೆಯಿಂದ ವಿಚ್ಛೇದನ ಪಡೆದು ಬೇರೆಬೇರೆಯಾದರು. ಅದರ ನಂತರ ಚಾಹಲ್ ಅವರ ಹೆಸರು ಆರ್‌ಜೆ ಮಹಾವಶ್ ಅವರೊಂದಿಗೆ ತಳುಕು ಹಾಕಿಕೊಂಡಿತು.
36
ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದ ನಂತರ, ಚಾಹಲ್ ಆಗಾಗ್ಗೆ ಆರ್‌ಜೆ ಮಹಾವಾಶ್ ಜೊತೆ ಕಾಣಿಸಿಕೊಳ್ಳುತ್ತಿದ್ದರು. ಇದರಿಂದಾಗಿ, ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡಿತು. ಆದರೆ ಪಾಡ್‌ಕ್ಯಾಸ್ಟ್‌ನಲ್ಲಿ, ಚಾಹಲ್ ಅವರು ಮಹಾವಾಶ್ ಸ್ನೇಹಿತೆ ಮಾತ್ರ ಎಂದು ಹೇಳಿದರು. ಕಷ್ಟದ ಸಮಯದಲ್ಲಿ ಅವಳು ಅವನನ್ನು ಬೆಂಬಲಿಸಿದಳು ಎಂದಿದ್ದರು.
ಈಗ ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ. ಇನ್ಸ್‌ಟಾಗ್ರಾಮ್‌ನಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ ಎಂದು ಅಭಿಮಾನಿಗಳು ಗಮನಿಸಿದ್ದಾರೆ. ಇವರಿಬ್ಬರ ನಡುವಿನ ಮನಸ್ತಾಪಕ್ಕೆ ಕಾರಣವೇನು ಅನ್ನೋದರ ಚರ್ಚೆ ಆರಂಭವಾಗಿದೆ.
56
ಕೆಲವು ಸಮಯದ ಹಿಂದೆ, ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ತಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ಹೇಳುತ್ತಿದ್ದರು. ಈಗ, ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ಅವರ ಸ್ನೇಹ ಮುರಿದುಹೋಗಲು ಕಾರಣವೇನು? ಅನ್ನೋದು ಗೊತ್ತಾಗಿಲ್ಲ.
66
2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಯಜುವೇಂದ್ರ ಚಾಹಲ್ ಮತ್ತು ಆರ್ ಜೆ ಮಹ್ವಾಶ್ ಒಟ್ಟಿಗೆ ಕಾಣಿಸಿಕೊಂಡಿದ್ದರು. ಅದಾದ ನಂತರ, ಅವರ ಸಂಬಂಧದ ಬಗ್ಗೆ ವದಂತಿಗಳು ಹರಡಿತು. ಇಬ್ಬರೂ ಒಟ್ಟಿಗೆ ಇರುವ ಅನೇಕ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.