ವಿನಯ್ ರಾಜ್‌ಕುಮಾರ್ ಹಾಗೂ ದುನಿಯಾ ವಿಜಯ್ ಪುತ್ರಿ ಮೋನಿಷಾ ವಿಜಯ್ ಕಾಂಬಿನೇಶನ್‌ನ ‘ಸಿಟಿ ಲೈಟ್ಸ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರದ ಮುಹೂರ್ತದಲ್ಲಿ ರಾಘವೇಂದ್ರ ರಾಜ್‌ಕುಮಾರ್ ದಂಪತಿ ಕ್ಲಾಪ್ ಮಾಡಿ ಶುಭ ಹಾರೈಸಿದರು.