ಅಮರ್ ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್, ನಂತರ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ನಟಿಸಿದ್ದರು. ಅಮರ್ ಸಿನಿಮಾ ಮ್ಯೂಸಿಕಲ್ ಹಿಟ್ ಆಗಿತ್ತು. ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿನ ಅಭಿಷೇಕ್ ನಟನೆ ಮೆಚ್ಚುಗೆ ಬಂದ್ರೂ, ಚಿತ್ರ ಜನರನ್ನು ಸೆಳೆಯುವಲ್ಲಿ ವಿಫಲವಾಗಿತ್ತು. ಸದ್ಯ ಕಾಳಿ ಚಿತ್ರದಲ್ಲಿ ಅಭಿಷೇಕ್ ನಟಿಸುತ್ತಿದ್ದಾರೆ.