Shiva Rajkumar's Dad Movie: ಶಿವರಾಜ್‌ಕುಮಾರ್ 'ಡ್ಯಾಡ್‌' ಮೂಲಕ 32 ವರ್ಷದ ಹಿಂದಿನ ಮುಹೂರ್ತ ಮತ್ತೆ ಮರುಕಳಿಸಿತು

Published : Aug 18, 2025, 08:55 PM IST

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್’ ಸಿನಿಮಾ ಮುಹೂರ್ತ ಸಮಾರಂಭ ನೆರವೇರಿತು. ಗೀತಾ ಶಿವರಾಜಕುಮಾರ್ ಅವರು ಸಿನಿಮಾದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭ ಕೋರಿದರು. 

PREV
15

ಸುಮಾರು 32 ವರ್ಷಗಳ ಹಿಂದೆ ಶಿವರಾಜ್‍ಕುಮಾರ್ ಅಭಿನಯದ ‘ಜಗ ಮೆಚ್ಚಿದ ಹುಡುಗ’ ಚಿತ್ರ ಸಹ ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್‍ ನಂದಿ ವಿಗ್ರಹದ ಎದುರು ಶುರುವಾಗಿತ್ತು. ಈಗ ಅದೇ ನಂದಿ ದೇವಸ್ಥಾನದಲ್ಲಿ ಹೊಸ ಸಿನಿಮಾಕ್ಕೆ ಚಾಲನೆ ಸಿಕ್ಕಿರುವುದು ವಿಶೇಷ.

25

‘ಭಗವಂತ್‍ ಕೇಸರಿ’, ‘ಉಗ್ರಂ’, ‘ಟಕ್‍ ಜಗದೀಶ್‍’ ಮುಂತಾದ ತೆಲುಗು ಚಿತ್ರಗಳನ್ನು ನಿರ್ಮಿಸಿದ್ದ ಹರೀಶ್‍ ಪೆದ್ದಿ, ಈ ಸಿನಿಮಾವನ್ನು ಮೈರಾ ಕ್ರಿಯೇಷನ್ಸ್ ಲಾಂಛನದಡಿ ನಿರ್ಮಿಸುತ್ತಿದ್ದಾರೆ. ತೆಲುಗಿನಲ್ಲಿ ‘ಅಸಾಧ್ಯುಡು’, ‘ಮಿಸ್ಟರ್ ನೂಕಯ್ಯ’, ‘ಹಿಡಿಂಬ’ ಸಿನಿಮಾಗಳನ್ನು ನಿರ್ದೇಶಿಸಿರುವ ಅನಿಲ್‍ ಕನ್ನೆಗಂಟಿ ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. 

35

ನಿರ್ಮಾಪಕರಿಗೆ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಸಿನಿಮಾವಾಗಿದೆ. ‘ಶಿವಣ್ಣ 131’ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಬಿ ಎಸ್‍ ಸುಧೀಂದ್ರ ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

45

“ಇದೊಂದು ತಂದೆ ಸೆಂಟಿಮೆಂಟ್‍ ಸಿನಿಮಾವಾಗಿದೆ. ಸಾಕಷ್ಟು ಥ್ರಿಲ್ಲಿಂಗ್‍ ಅಂಶಗಳು ಇರಲಿವೆ. ಶಿವರಾಜ್‍ಕುಮಾರ್ ಈ ಸಿನಿಮಾದಲ್ಲಿ ವೈದ್ಯನ ಪಾತ್ರ ಮಾಡುತ್ತಿದ್ದಾರೆ. ಈ ಹಿಂದೆ ‘ಗಡಿಬಿಡಿ ಕೃಷ್ಣ’ ಸಿನಿಮಾದಲ್ಲಿ ವೈದ್ಯರಾಗಿ ಕಾಣಿಸಿಕೊಂಡಿದ್ದ ಶಿವರಾಜ್‍ಕುಮಾರ್, ಸುಮಾರು 27 ವರ್ಷಗಳ ನಂತರ ಪುನಃ ಈ ಸಿನಿಮಾದಲ್ಲಿ ವೈದ್ಯರಾಗಿ ನಟಿಸುತ್ತಿದ್ದಾರೆ. ಬೆಂಗಳೂರು, ಮೈಸೂರಿನಲ್ಲಿ ಸುಮಾರು 50 ದಿನಗಳ ಕಾಲ ಶೂಟಿಂಗ್ ನಡೆಯಲಿದೆ.

55

‘ಡ್ಯಾಡ್‍’ ಸಿನಿಮಾದಲ್ಲಿ ಶಿವರಾಜ್‍ಕುಮಾರ್, ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಕ್ಕೆ ಅರ್ಜುನ್‍ ಜನ್ಯ ಸಂಗೀತ ನಿರ್ದೇಶನವಿದೆ. ಬಿ ರಾಜಶೇಖರ್ ಈ ಚಿತ್ರದ ಛಾಯಗ್ರಾಹಕರು.

Read more Photos on
click me!

Recommended Stories