Haripriya-Vasishta Simha: ಕೃಷ್ಣಮಠದಲ್ಲಿ ನೆಲಭೋಜನ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ!

Published : Oct 21, 2023, 12:50 PM ISTUpdated : Oct 21, 2023, 04:28 PM IST

ಖ್ಯಾತ ಚಲನಚಿತ್ರ ಕಲಾವಿದರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಗುರುವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಅವರು ಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ನೆಲಭೋಜನ ಹರಕೆಯನ್ನು ತೀರಿಸಿದರು. 

PREV
16
Haripriya-Vasishta Simha: ಕೃಷ್ಣಮಠದಲ್ಲಿ ನೆಲಭೋಜನ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ!

ಉಡುಪಿ (ಅ.21): ಸ್ಯಾಂಡಲ್‌ವುಡ್‌ನ ನಟ ವಸಿಷ್ಠ ಸಿಂಹ ಹಾಗೂ ಅವರ ಪತ್ನಿ ಹರಿಪ್ರಿಯಾ ಖುಷಿ-ಖುಷಿಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರು ಒಟ್ಟಾಗಿ ಹಲವು ಕಡೆಗಳಿಗೆ ತೆರಳಿದ್ದಾರೆ. 

26

ಇತ್ತೀಚೆಗಷ್ಟೇ ಈ ಜೋಡಿ ಮೊದಲ ಬಾರಿಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಮಾಡಿದ್ದರು. ಮಂತ್ರಾಲಯದ ಮಠಕ್ಕೆ ಆಗಮಿಸಿದ ಈ ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು.

36

ಇದೀಗ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಗುರುವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾದರು.

46

ಇದೇ ಸಂದರ್ಭದಲ್ಲಿ ಅವರು ಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ನೆಲಭೋಜನ ಹರಕೆಯನ್ನು ತೀರಿಸಿದರು. ಈ ಸಂದರ್ಭದಲ್ಲಿ ಖ್ಯಾತ ಭಕ್ತಿಗೀತೆ ಗಾಯಕ ಮಧೂರು ನಾರಾಯಣ ಸರಳಾಯ ಉಪಸ್ಥಿತರಿದ್ದರು.

56

ಕಂಚಿನ ಕಂಠದ ನಾಯಕ ನಟ ವಸಿಷ್ಠ ಸಿಂಹ ಅಕ್ಟೋಬರ್ 19 ರಂದು ಜನ್ಮ ದಿನ ಆಚರಿಸಿಕೊಂಡಿದ್ದರು. ಪತ್ನಿ ಹರಿಪ್ರಿಯಾ ಕೂಡ ಪತಿಯ ಜನ್ಮದಿನವನ್ನ ಕಲರ್‌ಫುಲ್ ಆಗಿಯೇ ಸೆಲೆಬ್ರೇಟ್ ಮಾಡಿದ್ದರು. 

66

ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜನವರಿ 26ರಂದು ಗಣರಾಜ್ಯ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೈಸೂರಿನ ಸಚ್ಚಿದಾನಂದ ಆಶ್ರಮದಲ್ಲಿ ಇಬ್ಬರ ಮದುವೆ ಸಮಾರಂಭ ನಡೆದಿತ್ತು. ಇಬ್ಬರು ಸರಳವಾಗಿ ಹಸೆಮಣೆ ಏರಿದ್ದು ಫೋಟೋಗಳು ಎಲ್ಲಾ ಕಡೆ ವೈರಲ್ ಆಗಿತ್ತು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories