ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಸಿಷ್ಠ ಸಿಂಹ-ಹರಿಪ್ರಿಯಾ ಜೋಡಿ; ಯಾರೆಲ್ಲ ಭಾಗಿಯಾಗಿದ್ದರು?

First Published Jan 26, 2023, 3:38 PM IST

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಾಂಪತ್ಯಕ್ಕೆ ಕಾಲಿಟ್ಟರು. ಇಂದು ಗಣರಾಜ್ಯ ದಿನದಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು ಮೈಸೂರಿನ ಸಚ್ಚಿದಾನಂದ ಆಶ್ರಮದಲ್ಲಿ ಇಬ್ಬರ ಮದುವೆ ಸಮಾರಂಭ ನಡೆದಿದೆ. 

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಾಂಪತ್ಯಕ್ಕೆ ಕಾಲಿಟ್ಟರು. ಇಂದು ಗಣರಾಜ್ಯ ದಿನದಂದೆ ವೈವೈಹಿಕ ಜೀವನಕ್ಕೆ ಕಾಲಿಟ್ಟಿದ್ದು ಮೈಸೂರಿನ ಸಚ್ಚಿದಾನಂದ ಆಶ್ರಮದಲ್ಲಿ ಇಬ್ಬರ ಮದುವೆ ಸಮಾರಂಭ ನಡೆದಿದೆ. 

ಹರಿಪ್ರಿಯಾ ಮತ್ತು ವಸಿಷ್ಠ ಮದುವೆಯ ಸುಂದರ ಫೋಟೋಗಳು ರಿವೀಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಬ್ಬರು ಸರಳವಾಗಿ ಹಸೆಮಣೆ ಏರಿದ್ದು ಫೋಟೋಗಳು ಎಲ್ಲಾ ಕಡೆ ಹರಿದಾಡುತ್ತಿವೆ. 
 

ವಸಿಷ್ಠ ಮತ್ತು ಹರಿಪ್ರಿಯಾ ಮದುವೆ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಹಾಜರಾಗಿದ್ದರು. ಗೆಳೆಯ ಧನಂಜಯ್, ಅಮೃತಾ ಐಯ್ಯಂಗರ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. 

ಗೆಳೆಯನ ಮದುವೆಯಲ್ಲಿ ನಟ ಧನಂಜಯ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.  ವಸಿಷ್ಠ ಮತ್ತು ಹರಿಪ್ರಿಯಾ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಪ್ರೀತಿಯ ಚಿಟ್ಟೆ ಹಾಗು ಹರಿಪ್ರಿಯಾ ಅವರಿಗೆ ಮದುವೆ ಶುಭಾಶಯಗಳು ಎಂದು ಹೇಳಿದ್ದಾರೆ. 

ಅಂದಹಾಗೆ ಮದುವೆ ಶಾಸ್ತ್ರಗಳ ಪೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅರಿಶಿಣ ಶಾಸ್ತ್ರದ ಸುಂದರ ಫೋಟೋಗಳನ್ನು ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಹಂಚಿಕೊಂಡಿದ್ದರು. ಬಿಳಿ ಬಣ್ಣದ ಡ್ರೆಸ್‌ನಲ್ಲಿ ಇಬ್ಬರೂ ಕಂಗೊಳಿಸಿದ್ದರು. 

2016ರಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಮೊದಲು ಭೇಟಿಯಾಗಿದ್ದು. ಸ್ನೇಹಿತರಾಗಿದ್ದ ಇಬ್ಬರೂ ಬಳಿಕ ಪ್ರೇಮಿಗಳಾದರು. ವಸಿಷ್ಠ ಅವರೇ ಮೊದಲು ಪ್ರಪೋಸ್ ಮಾಡಿದ್ದು ಎಂದು ಹೇಳಿಕೊಂಡಿದ್ದರು. ಇದೀಗ ಇಬ್ಬರೂ ಪತಿ-ಪತ್ನಿಯಾಗಿದ್ದಾರೆ. 

click me!