ಗೋಲ್ಡನ್ ಬ್ಯೂಟಿ ಅಮೂಲ್ಯ ತಮ್ಮ ಪತಿ ಜಗದೀಶ್ ಹಾಗೂ ಮಕ್ಕಳಾದ ಅಥರ್ವ್ ಮತ್ತು ಅಧವ್ ಜೊತೆ ತಿರುಪತಿ ಶ್ರೀವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ, ದರ್ಶನ ಪಡೆದು ಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ.
ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಅಮೂಲ್ಯ ಅವರು ಇತ್ತೀಚೆಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಪತಿ ಜಗದೀಶ್, ಮಕ್ಕಳು ಹಾಗೂ ಕುಟುಂಬ ಸದಸ್ಯರೊಂದಿಗೆ ತಿಮ್ಮಪ್ಪನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
25
ಅಲಿಪಿರಿ ಮೆಟ್ಟಿಲು ಹತ್ತಿ ದರ್ಶನ ಪಡೆದ ನಟಿ
ಗೋಲ್ಡನ್ ಕ್ವೀನ್ ಅಮೂಲ್ಯ ತಮ್ಮ ಪತಿ ಜೊತೆ ಅಲಿಪಿರಿ ಮೆಟ್ಟಿಲೇರಿ, ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಪತಿ ಜಗದೀಶ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತಿಮ್ಮಪ್ಪನ ದರ್ಶನದ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
35
ಫೋಟೊ ವೈರಲ್
ದೇವಾಲಯದ ದರ್ಶನದ ಬಳಿಕ ಅಮೂಲ್ಯ ತಮ್ಮ ಕುಟುಂಬದ ಜೊತೆ ದೇಗುಲದ ಮುಂದೆ ನಿಂತು ತೆಗೆದಿರುವಂತಹ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಗಮನ ಸೆಳೆದಿವೆ.ಅಮೂಲ್ಯ ಸಿಂಪಲ್ ಆಗಿ ಸೀರೆಯುಟ್ಟಿದ್ದರೆ, ಜಗದೀಶ್ ಪಂಚೆ ಶರ್ಟ್ ಧರಿಸಿ ಕಾಣಿಸಿಕೊಂಡಿದ್ದಾರೆ..
ಚಂದನವನದ ಸುಂದರಿ ಅಮೂಲ್ಯ ಮದುವೆಯ ನಂತರ ಸಿನಿಮಾಗಳಿಂದ ಸ್ವಲ್ಪ ದೂರ ಉಳಿದಿದ್ದಾರೆ. ಕುಟುಂಬ ಜೀವನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಆಧವ್ ಮತ್ತು ಅಥರ್ವ್ ಎನ್ನುವ ಅವಳಿ ಮಕ್ಕಳ ತಾಯಿಯಾದ ಬಳಿಕ ನಟಿ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಶೀಘ್ರದಲ್ಲಿ ಸಿನಿಮಾಗೆ ಹಿಂದಿರುಗಲಿದ್ದಾರೆ.
55
ಶೀಘ್ರದಲ್ಲಿ ನಾಯಕಿಯಾಗಿ ಎಂಟ್ರಿ
ಅಮೂಲ್ಯ ಅವರನ್ನು ಮತ್ತೆ ಬೆಳ್ಳಿ ಪರದೆಯಲ್ಲಿ ನೋಡಲು ವೀಕ್ಷಕರು ಕಾಯುತ್ತಿದ್ದು, ಕೆಲವು ಸಮಯಗಳ ಹಿಂದೆ ನಟಿ ‘ಪಿಕಾಬೂ’ ಎನ್ನುವ ಹೊಸ ಸಿನಿಮಾದಲ್ಲಿ ನಟಿಸಿರುವುದಾಗಿ ತಿಳಿಸಿದ್ದರು. ಅಭಿಮಾನಿಗಳು ಸಖತ್ ಖುಷಿಯಾಗಿದ್ದರು. ಶ್ರೀರಾಮ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಎಂದು ಕಾಯುತ್ತಿದ್ದಾರೆ ಫ್ಯಾನ್ಸ್.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.