ಕಿಚ್ಚ ಸುದೀಪ್ ಅವರ ಮುಂಬರುವ ಚಿತ್ರ ಮಾರ್ಕ್ ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ವಿಜಯ್ ಕಾರ್ತಿಕೇಯ ನಿರ್ದೇಶಿಸಲಿರುವ ಈ ಸಿನಿಮಾದಲ್ಲಿ ಐಪಿಎಲ್ ಸ್ಟಾರ್ ಪ್ಲೇಯರ್ ಶರತ್ ಪತ್ನಿ ನಟಿಸುತ್ತಿದ್ದಾರೆ.
ಬಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಿಚ್ಚ ಸುದೀಪ್ ಅವರ ಮುಂಬರುವ ಚಿತ್ರ ಮಾರ್ಕ್ ಈಗಾಗಲೇ ಮೊದಲ ಝಲಕ್‌ನಲ್ಲೇ ಸಿನಿಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಮಾರ್ಕ್ ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ.
25
ವಿಜಯ್ ಕಾರ್ತಿಕೇಯ ನಿರ್ದೇಶನ
ವಿಜಯ್ ಕಾರ್ತಿಕೇಯ ನಿರ್ದೇಶಿಸಲಿರುವ ಈ ಸಿನಿಮಾವನ್ನು ಸತ್ಯ ಜ್ಯೋತಿ ಫಿಲ್ಮ್ಸ್ ನಿರ್ಮಿಸಿದ್ದಾರೆ. ಕಿಚ್ಚ ಕ್ರಿಯೇಷನ್ಸ್ ಮೂಲಕ ಸುದೀಪ್ ಸಹ ಬಂಡವಾಳ ಹೂಡಿದ್ದಾರೆ. ಡಿಸೆಂಬರ್ 25 ರಂದು ಕ್ರಿಸ್‌ಮಸ್ ಸಂದರ್ಭದಲ್ಲಿ ಮಾರ್ಕ್ ಚಿತ್ರವನ್ನು ಬಿಡುಗಡೆ ಮಾಡಬೇಕೆಂಬ ಪ್ರಯತ್ನ ನಡೆಯುತ್ತಿದೆ.
35
ಮಾರ್ಕ್ ಚಿತ್ರದಲ್ಲಿ ಅರ್ಚನಾ
ಇದೀಗ ಮಾರ್ಕ್ ಚಿತ್ರದಲ್ಲಿ ನಟಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ. ಈಗಾಗಲೇ ರೋಶಿನಿ ಪ್ರಕಾಶ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗ ಅರ್ಚನಾ ಕೊಟ್ಟಿಗೆ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.
ಸದ್ಯಕ್ಕೆ ಐಪಿಎಲ್ ಸ್ಟಾರ್ ಪ್ಲೇಯರ್ ಶರತ್ ಪತ್ನಿ ಅರ್ಚನಾ ಕೊಟ್ಟಿಗೆ ಪಾತ್ರವನ್ನು ಗುಟ್ಟಾಗಿ ಇಡಲಾಗಿದೆ. ಇತ್ತೀಚೆಗೆ ಕಿಚ್ಚನ ಹುಟ್ಟುಹಬ್ಬಕ್ಕೆ ಸಿನಿಮಾದ ಪೋಸ್ಟರ್, ಟೈಟಲ್ ಇನ್ನಿತರೆಗಳನ್ನು ಹಂಚಿಕೊಳ್ಳಲಾಗಿತ್ತು.
55
ಸ್ಯಾಂಡಲ್‌ವುಡ್‌ನ ಹಲವು ಸಿನಿಮಾಗಳಲ್ಲಿ ನಟನೆ
ಇನ್ನು ಅರ್ಚನಾ ಕೊಟ್ಟಿಗೆ ಸ್ಯಾಂಡಲ್‌ವುಡ್‌ನ ನಟಿ. ಅರಣ್ಯಕಾಂಡ, ವಾಸು ನಾನ್ ಪಕ್ಕಾ ಕಮರ್ಷಿಯಲ್, ಡಿಯರ್ ಸತ್ಯಾ, ಯೆಲ್ಲೋ ಗ್ಯಾಂಗ್ಸ್, ಹೊಂದಿಸಿ ಬರೆಯಿರಿ, ಎಕ್ಕಾ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ.