ದೊಡ್ಡ ಮನೆ, ಪುಟ್ಟ ಕುಟುಂಬ.. ನಾನು ಮತ್ತು ನನ್ನ ತಂದೆ, ಬೆಳಗ್ಗೆ ಎದ್ದು ಮನೆಯಂಗಳದಲ್ಲಿ ಕಾಫಿ ಹೀರುತ್ತಾ ಕೂತರೆ, ಇಲ್ಲಿ ಹಕ್ಕಿಗಳದ್ದೇ ನಾದ ನಿನಾದ.. ಕು ಕು ಮೈನಾ, ಕಿಚಿ ಪಿಚಿ ಗುಬ್ಬಚ್ಚಿ, ನಿತ್ಯವೂ ಬರೀ ಹಕ್ಕಿಗಳದ್ದೇ ಕಲರವ.. ಹಕ್ಕಿ ಪಿಕ್ಕಿಗಳ ಹಾಡು ಪಾಡು ಕೇಳುತ್ತಿದ್ದ ಮನೆಯಲ್ಲೀಗ, ಹೊಸದೊಂದು ಪುಟ್ಟ ಹಕ್ಕಿಯ ಸರಿಗಮ.. ಮನೆಯ ಗೂಡಲ್ಲಿ ಚುಯ್ ಚುಯ್ ಸದ್ದು ಮಾಡುತ್ತಿರುವ ಈ ಪುಟ್ಟ ಹಕ್ಕಿಗೆ ಏನೆಂದು ಹೆಸರಿಡುವುದು..? ನಮ್ಮನ್ನು ನಯವಾಗಿ ಬಂಧಿಸಿದ ಸುಂದರ ಬಲೆ, ಇದು ಹೊಸ ಪ್ರೀತಿಯ ಅಲೆ.. ವಿನೂತನ ವಿಸ್ಮಯ.