ಕಿಚ್ಚ ಸುದೀಪ್ ಅವರ 47ನೇ ಚಿತ್ರ K47 ಬಗ್ಗೆ ದಿನೇ ದಿನೇ ನಿರೀಕ್ಷೆಗಳು ಹೆಚ್ಚಾಗುತ್ತಿವೆ. 2025ರಲ್ಲಿಯೇ ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಿರುವುದರಿಂದ, ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ.
25
ಸುದೀಪ್ ನಟನೆಯ 47ನೇ ಚಿತ್ರಕ್ಕೆ ನಿಶ್ಚಿಕಾ ನಾಯ್ಡು ಎಂಟ್ರಿಕೊಟ್ಟಿದ್ದಾರೆ ಎನ್ನಲಾಗಿದೆ. ಈ ಚಿತ್ರದಲ್ಲಿ ನಾಯಕಿ ಪಾತ್ರವನ್ನು ದೀಪ್ಷಿಕಾ ನಿರ್ವಹಿಸುತ್ತಿದ್ದು, ನಿಶ್ವಿಕಾ ಮುಖ್ಯ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರಂತೆ. ಈ ವಿಚಾರವನ್ನು ಚಿತ್ರತಂಡ ಇನ್ನಷ್ಟೇ ಅಧಿಕೃತಗೊಳಿಸಬೇಕಿದೆ.
35
‘ಮ್ಯಾಕ್ಸ್’ ನಿರ್ದೇಶಕ ವಿಜಯ್ ಕಾರ್ತಿಕೇಯನ್ ನಿರ್ದೇಶನದ ಈ ಸಿನಿಮಾದ ಶೂಟಿಂಗ್ ಸದ್ಯ ಚೆನ್ನೈಯಲ್ಲಿ ಭರದಿಂದ ನಡೆಯುತ್ತಿದೆ. ಈ ವರ್ಷವೇ ಸಿನಿಮಾ ರಿಲೀಸ್ ಮಾಡುವ ಇರಾದೆಯಲ್ಲಿ ಚಿತ್ರತಂಡವಿದೆ. ಸತ್ಯಜ್ಯೋತಿ ಫಿಲಂ ಚಿತ್ರಕ್ಕೆ ಬಂಡವಾಳ ಹೂಡಿದೆ.
ನಾಯಕ ಹಾಗೂ ಖಳನಾಯಕನ ಪಾತ್ರಗಳಲ್ಲಿ ತಮ್ಮದೇ ಆದ ಛಾಫು ಮೂಡಿಸಿರುವ ನವೀನ್ ಚಂದ್ರ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಜಯ ಕಾರ್ತಿಕೇಯ ನಿರ್ದೇಶನದ ಈ ಚಿತ್ರ ತಮಿಳಿನಲ್ಲೂ ಮೂಡಿಬರಲಿದೆ.
55
ಈ ಚಿತ್ರಕ್ಕೆ ಮ್ಯಾಕ್ಸ್ ಚಿತ್ರಕ್ಕಾಗಿ ಕೆಲಸ ಮಾಡಿದ್ದ ತಾಂತ್ರಿಕ ತಂಡವೇ ಕೆಲಸ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಶೇಖರ್ ಚಂದ್ರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.