ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನಟಿ ಪ್ರಣಿತಾ ಸುಭಾಷ್‌: ಯಾಕೆ ಗೊತ್ತಾ?

Published : Apr 20, 2025, 11:13 PM ISTUpdated : Apr 20, 2025, 11:14 PM IST

ದರ್ಶನ್‌ ಅಭಿನಯದ 'ಪೊರ್ಕಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿದ ನಟಿ ಪ್ರಣಿತಾ ಸುಭಾಷ್‌ ತಾಯ್ತನದ ಖುಷಿಯಲ್ಲಿದ್ದಾರೆ. ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮಧ್ಯೆ ತಮ್ಮ ಮಗನ ನಾಮಕರಣ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

PREV
15
ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನಟಿ ಪ್ರಣಿತಾ ಸುಭಾಷ್‌: ಯಾಕೆ ಗೊತ್ತಾ?

ಸ್ಯಾಂಡಲ್‌ವುಡ್‌ ನಟಿ ಪ್ರಣಿತಾ ಸುಭಾಷ್‌ ಸದ್ಯ ನಟನೆಗೆ ಬ್ರೇಕ್‌ ಕೊಟ್ಟು ಇಬ್ಬರು ಮಕ್ಕಳ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ನಟಿಸದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಆ್ಯಕ್ಟಿವ್‌ ಆಗಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
 

25

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರಣಿತಾ ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದೇಕೆ? ಎಂಬ ಮಾತು ಬರುತ್ತದೆ.

35

ಪ್ರಣಿತಾ ಅವರು ಮಗನ ನಾಮಕರಣ ಹಿನ್ನೆಲೆಯಲ್ಲಿ ಅವರು ಖುದ್ದಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದ್ದಾರೆ. ಈ ವೇಳೆ ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಅವರ ಆರೋಗ್ಯವನ್ನೂ ನಟಿ ವಿಚಾರಿಸಿದ್ದಾರೆ.
 

45

ಪ್ರಣಿತಾ 2021ರಲ್ಲಿ ಮದುವೆಯಾದರು. ನಿತಿನ್‌ ರಾಜು ಎಂಬವರನ್ನು ವರಿಸಿದ ಪ್ರಣಿತಾ ಅವರಿಗೆ ಈಗ ಇಬ್ಬರು ಮಕ್ಕಳಿದ್ದಾರೆ. 2022ರ ಜೂನ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಣಿತಾ-ನಿತಿನ್‌ ದಂಪತಿಗೆ ಗಂಡು ಮಗು ಜನಿಸಿತ್ತು.
 

55

2 ಮಕ್ಕಳ ತಾಯಿಯಾದರೂ ಪ್ರಣಿತಾ ಫಿಟ್‌ನೆಸ್‌ ಕಾಯ್ದುಕೊಂಡಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಸಂತೂರ್‌ ಮಮ್ಮಿ ಎಂದೇ ಕರೆಯುತ್ತಾರೆ. ಇತ್ತೀಚೆಗೆ ಅವರು ಫ್ರಾನ್ಸ್‌ನಲ್ಲಿ ನಡೆದ ಜಗತ್ತಿನ ಪ್ರತಿಷ್ಠಿತ ಪ್ಯಾರಿಸ್ ಫ್ಯಾಷನ್ ವೀಕ್‌ನಲ್ಲಿ ಭಾಗಿಯಾಗಿದ್ದರು. 

Read more Photos on
click me!

Recommended Stories