ಕರಾವಳಿಗೆ ನಾಯಕಿಯಾಗಿ ಸಂಪದಾ ಎಂಟ್ರಿ; ಪ್ರಜ್ವಲ್ ಜೊತೆ ಬೊಂಬಾಟ್ ರೊಮ್ಯಾನ್ಸ್!

Published : Feb 15, 2024, 07:22 PM IST

ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಸಂಪದಾ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಡೈನಾಮಿಕ್ ಪ್ರಿನ್ಸ್ ಈ ಸಿನಿಮಾದಲ್ಲಿ ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. 

PREV
111
ಕರಾವಳಿಗೆ ನಾಯಕಿಯಾಗಿ ಸಂಪದಾ ಎಂಟ್ರಿ; ಪ್ರಜ್ವಲ್ ಜೊತೆ ಬೊಂಬಾಟ್ ರೊಮ್ಯಾನ್ಸ್!

ಗುರು-ಪ್ರಜ್ವಲ್ ಕಾಂಬಿನೇಷನ್‌ನ ಕರಾವಳಿಗೆ ಸಂಪದಾ ನಾಯಕಿ; ಕರಾವಳಿ, ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶದ ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಸಿನಿಮಾದ ಅಪ್‌ಡೇಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. 

211

ಇದೀಗ ಸಿನಿಮಾದಿಂದ ನಾಯಕಿ ಯಾರು ಎನ್ನುವ ಮಾಹಿತಿ ಬಹಿರಂಗವಾಗಿದೆ. ಕರಾವಳಿಗೆ ನಾಯಕಿ ಯಾರಾಗಲಿದ್ದಾರೆ? ಕನ್ನಡದವರಾ ಅಥವಾ ಪರಭಾಷೆಯ ನಟಿನಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಆದರೀಗ ಆ ಕುತೂಹಲಕ್ಕೆ ತೆರೆ ಎಳೆದಿದೆ ಸಿನಿಮಾತಂಡ. 

311

ನಟಿ ಸಂಪದಾ ಕರಾವಳಿ ಸಿನಿಮಾಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ್ದ ಸಂಪದಾ ಇದೀಗ ಪ್ಜಜ್ವಲ್‌ಗೆ ನಾಯಕಿಯಾಗುವ ಮೂಲಕ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. 
 

411

ಕಿರುತೆರೆ ಬಳಿಕ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳದ ಸಂಪದಾ ಇದೀಗ ಬಹುನಿರೀಕ್ಷೆಯ ಸಿನಿಮಾಗೆ ನಾಯಕಿಯಾಗಿ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ಸಂಪದಾಗೆ ಇದು  ಮೊದಲ ಸಿನಿಮಾವಲ್ಲ. ಈಗಾಗಲೇ ನಿಖಿಲ್ ಕುಮಾರ್ ನಟನೆಯ ರೈಡರ್ ಸಿನಿಮಾದಲ್ಲಿ ಸಂಪದಾ ನಟಿಸಿದ್ದರು. 

511

ಇದೀಗ ಕರಾವಳಿ ಕಥೆ ಕೇಳಿ ಇಂಪ್ರೆಸ್ ಆದ ಸಂಪದಾ ಪ್ರಜ್ವಲ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದು ಪ್ರೇಮಿಗಳ ದಿನದ ವಿಶೇಷವಾಗಿ ಕರಾವಳಿ ಸಿನಿಮತಂಡ ನಾಯಕಿ ಯಾರೆಂದು ರಿವೀಲ್ ಮಾಡಿದೆ. 

611

ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಸಂಪದಾ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ಟೈಟಲ್ ಹೇಳುವ ಹಾಗೆ ಇದು ಪಕ್ಕಾ ಕರಾವಳಿ ಭಾಗದ  ಸಿನಿಮಾ. ಸಂಪೂರ್ಣ ಬ್ಯಾಕ್ ಡ್ರಾಪ್ ಕರಾವಳಿ ಭಾಗದ್ದೆ ಆಗಿರಲಿದೆ. ಸಂಪದಾ ಕೂಡ ಕರಾವಳಿ ಹುಡುಗಿಯಾಗಿ ಮಿಂಚಲಿದ್ದಾರೆ. 
 

711

ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರಜ್ವಲ್ ನಟನೆಯ 40ನೇ ಸಿನಿಮಾ ಇದಾಗಿದೆ. 

811

ಡೈನಾಮಿಕ್ ಪ್ರಿನ್ಸ್ ಈ ಸಿನಿಮಾದಲ್ಲಿ ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಸದ್ಯ ಫಸ್ಟ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ  ಕರಾವಳಿ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ ಮಾಡಲಿದೆ. ಸಂಪೂರ್ಣ ಚಿತ್ರೀಕಣ ಮಂಗಳೂರು ಸುತ್ತಮುತ್ತ ನಡೆಯಲಿದೆ.

911

ಈಗಾಗಲೇ ಕಿರುತೆರೆಯಲ್ಲಿ ಸಖತ್ ಮಿಂಚು ಹರಿಸಿರುವ ಸಂಪದಾ ಸಿನಿಮಾದಲ್ಲೂ ತಮ್ಮ ಕೈಚಳಕ ತೋರಿಸಬಹುದೇ? ಸದ್ಯಕ್ಕೆ ಉತ್ತರ ಗೊತ್ತಿಲ್ಲ, ಭವಿಷ್ವನ್ನು ಬಲ್ಲವರಾರು ಎನ್ನಲೇಬೇಕು. 

1011

ಒಟ್ಟಿನಲ್ಲಿ, ಡೈನಾಮಿಕ್ ಪ್ರಿನ್ಸ್ ಖ್ಯಾತಿಯ ನಟ ಪ್ರಜ್ವಲ್ ದೇವರಾಜ್ ಜತೆ ಕರವಾಳಿ ಚಿತ್ರಕ್ಕೆ ಆಯ್ಕೆಯಾಗುವ ಮೂಲಕ ನಟಿ ಸಂಪದಾ ತಮ್ಮ ವೃತ್ತಿ ಜೀವನದಲ್ಲಿ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿದ್ದಾರೆ. 

1111

 ಕರಾವಳಿ ಕಥೆ ಕೇಳಿ ಇಂಪ್ರೆಸ್ ಆದ ಸಂಪದಾ ಪ್ರಜ್ವಲ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಡೈನಾಮಿಕ್ ಪ್ರಿನ್ಸ್ ಖ್ಯಾತಿಯ ನಟ ಪ್ರಜ್ವಲ್ ದೇವರಾಜ್ ಜತೆ ಕರಾವಳಿ ಚಿತ್ರಕ್ಕೆ ಆಯ್ಕೆಯಾಗುವ ಮೂಲಕ ನಟಿ ಸಂಪದಾ ಹೊಸ ಖಾತೆ ತೆರೆದಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories