Happy Birthday Rishab Shetty: ಕಾಂತಾರ ಸ್ಟಾರ್ ಹುಟ್ಟುಹಬ್ಬಕ್ಕೆ ನಾಯಕಿ ಸಪ್ತಮಿಯ ಪ್ರೀತಿಯ ವಿಶ್ ಹೀಗಿದೆ

Published : Jul 07, 2023, 02:01 PM IST

ಕನ್ನಡ ಸ್ಟಾರ್ ರಿಷಬ್ ಶೆಟ್ಟಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಟಿ ಸಪ್ತಮಿ ಗೌಡ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. 

PREV
18
Happy Birthday Rishab Shetty: ಕಾಂತಾರ ಸ್ಟಾರ್ ಹುಟ್ಟುಹಬ್ಬಕ್ಕೆ ನಾಯಕಿ ಸಪ್ತಮಿಯ ಪ್ರೀತಿಯ ವಿಶ್ ಹೀಗಿದೆ

ಕನ್ನಡ ಸ್ಟಾರ್ ರಿಷಬ್ ಶೆಟ್ಟಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕಾಂತಾರ ಸಿನಿಮಾ ಮೂಲಕ ವಿಶ್ವ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ರಿಷಬ್ ಶೆಟ್ಟಿ ಅವರಿಗೆ ಈ ವರ್ಷದ ಹುಟ್ಟುಹಬ್ಬ ತುಂಬಾ ವಿಶೇಷವಾಗಿದೆ. 

28

ರಿಷಬ್ ಶೆಟ್ಟಿ ಅವರಿಗೆ ದೇಶದ ಮೂಲೆ ಮೂಲೆಯಿಂದ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡಿ ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಅಭಿಮಾನಿಗಳ ಜೊತೆಗೆ ಅನೇಕ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ.   

38

ಕಾಂತಾರ ನಾಯಕಿ ಸಪ್ತಮಿ ಗೌಡ ಕೂಡ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಂದರ ಫೋಟೋಗಳನ್ನು ಶೇರ್ ಮಾಡಿ ವಿಶ್ ಮಾಡಿದ್ದಾರೆ. ಮತ್ತಷ್ಟು ಎತ್ತರಕ್ಕೆ ಬೆಳೆಯಿರಿ ಎಂದು ಹೇಳಿದ್ದಾರೆ.   

48

ನಿಮ್ಮ ದೃಢನಿರ್ಧಾರ ಮತ್ತು ಸಿನಿಮಾ ಮೇಲಿನ ಉತ್ಸಾಹದಿಂದ ನೀವು ಮತ್ತಷ್ಟು ಎತ್ತರವನ್ನು ತಲುಪಿ. ಸಂತೋಷ, ಪ್ರೀತಿ ಮತ್ತು ಶಾಂತಿಯಿಂದ ತುಂಬಿದ ಹೆಚ್ಚು ಯಶಸ್ವಿ ವರ್ಷ ನಿಮ್ಮದಾಗಲಿ' ಎಂದು ಹೇಳಿದ್ದಾರೆ. 
 

58

'ನಿಮ್ಮೊಂದಿಗೆ ಕೆಲಸ ಮಾಡಲು ಮತ್ತು ನಿಮ್ಮ ನಿರ್ದೇಶನದಲ್ಲಿ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿದ್ದಕ್ಕಾಗಿ ನಾನು ಎಷ್ಟು ಕೃತಜ್ಞನಾಗಿದ್ದೇನೆ ಎಂದು ಎಷ್ಟೇ ಧನ್ಯವಾದ ಹೇಳಿದರೂ ಸಾಕಾಗುವುದಿಲ್ಲ. ಕಾಂತಾರ ಮತ್ತು ಸೆಟ್‌ನಲ್ಲಿದ್ದಾಗ ನಾನು ಮಾಡಿದ ಎಲ್ಲಾ ಕಲಿಕೆಗಾಗಿ ಧನ್ಯವಾದಗಳು' ಎಂದು ಹೇಳಿದ್ದಾರೆ.
 

68

ರಿಷಬ್ ಶೆಟ್ಟಿ ಈ ಬಾರಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಾಂತಾರ ಸಕ್ಸಸ್ ಬಳಿಕ ರಿಷಬ್ ಮೊದಲ ಬಾರಿಗೆ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. 

78

ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ರಿಷಬ್ ಶೆಟ್ಟಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಸೇರಲಿದ್ದು ಕಾಂತಾರ ಸ್ಟಾರ್‌ಗೆ ಪ್ರೀತಿಯ ಶುಭಾಶಯ ತಿಳಿಸಲಿದ್ದಾರೆ. 

88

ರಿಷಬ್ ಶೆಟ್ಟಿ ಕಾಂತಾರ-2ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸ್ಕ್ರಿಪ್ಟ್ ಕೆಲಸದಲ್ಲಿ ರಿಷಬ್ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ಕಾಂತಾರ-2 ಸಿನಿಮಾವನ್ನು ಲಾಂಚ್ ಮಾಡಲಿದ್ದಾರೆ ರಿಷಬ್ ಶೆಟ್ಟಿ. ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿರುವುದು ಪಾರ್ಟ್ 2 ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಹಾಗಾಗಿ ಪಾರ್ಟ್ ದೊಡ್ಡ ಚಾಲೆಂಜ್ ಆಗಿದೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories