ಮುಂದೆ ಬರಲಿರುವ ತಾರೆಗಳು
ಉಪೇಂದ್ರ ನಟನೆಯ ‘ಯುಐ’, ಧ್ರುವ ಸರ್ಜಾ ಅವರ ‘ಮಾರ್ಟಿನ್’ ಹಾಗೂ ‘ಕೆಡಿ’, ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರಗಳು 2024ನೇ ವರ್ಷದ ದೊಡ್ಡ ಸಿನಿಮಾಗಳು ಎಂದುಕೊಳ್ಳಬಹುದು. ಈ ಪೈಕಿ ‘ಯುಐ’ ಹಾಗೂ ‘ಮಾರ್ಟಿನ್’ ಮುಂದಿನ ತಿಂಗಳು ಬರುತ್ತಿವೆ.
ಪರಭಾಷೆಯ ಸ್ಟಾರ್‌ಗಳದ್ದೇ ಮೇಲುಗೈ
ಕನ್ನಡದಲ್ಲಿ ತಾರೆಗಳು ನಾಪತ್ತೆ ಎನಿಸಿಕೊಂಡರೆ ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಸ್ಟಾರ್‌ಗಳು ಸದ್ದು ಮಾಡಿದ್ದಾರೆ. ತೆಲುಗಿನಲ್ಲಿ ಪ್ರಭಾಸ್, ಮಹೇಶ್ ಬಾಬು, ರವಿತೇಜ, ರಾಮ್ ಪೋತಿನೇನಿ, ವಿಜಯ್ ದೇವರಕೊಂಡ, ನಾನಿ, ಅಕ್ಕಿನೇನಿ ನಾರ್ಜುನಾ, ತಮಿಳಿನಲ್ಲಿ ಧನುಷ್, ವಿಕ್ರಮ್, ವಿಜಯ್, ವಿಜಯ್ ಸೇತುಪತಿ, ಜಯಂ ರವಿ, ಶಶಿಕುಮಾರ್, ವಿಜಯ್ ಆ್ಯಂಟನಿ, ವಿಶಾಲ್ ಹಾಗೂ ಮಯಾಳಂನಲ್ಲಿ ಮಮ್ಮುಟ್ಟಿ, ಫಹಾದ್ ಫಾಸಿಲ್, ಪೃಥ್ವಿರಾಜ್ ಸುಕುಮಾರನ್, ಟೊವಿನೋ ಥಾಮಸ್... ಹೀಗೆ ಆಯಾ ಭಾಷೆಯಲ್ಲಿ ದೊಡ್ಡ ತಾರೆಗಳ ಚಿತ್ರಗಳು ಬಂದಿವೆ.