ಚಿತ್ರಗಳು: ಚಿರು ಸರ್ಜಾ ಜೊತೆಗಿನ ಬಾಲ್ಯದ ಫೋಟೋ ಹಂಚಿಕೊಂಡ ಅರ್ಜುನ್ ಸರ್ಜಾ ಪುತ್ರಿ

First Published | Jun 13, 2020, 8:29 PM IST

ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕವಾಗಿ ಮರಣ ಹೊಂದಿದ್ದು, ಇಡೀ ಕುಟುಂಬದವರು ದುಃಖದಲ್ಲಿದ್ದಾರೆ. ಇನ್ನು ನಟಿ ಐಶ್ವರ್ಯಾ ಅರ್ಜುನ್ ಕೂಡ ಚಿರಂಜೀವಿಯನ್ನು ನೆನೆದು ಭಾವುಕರಾಗಿದ್ದಾರೆ.

ಅರ್ಜುನ್ ಸರ್ಜಾ ಪುತ್ರಿ, ನಟಿ ಐಶ್ವರ್ಯಾ ಚಿರಂಜೀವಿ ಸರ್ಜಾ ಜೊತೆಗಿನ ಬಾಲ್ಯದ ಫೋಟೋ ಹಂಚಿಕೊಂಡು ಭಾವುಕರಾಗಿದ್ದಾರೆ.
ನಟ ಅರ್ಜುನ್ ಅವರ ಪುತ್ರಿ ಐಶ್ವರ್ಯಾ ಇನ್‍ಸ್ಟಾಗ್ರಾಂನಲ್ಲಿ ಚಿರಂಜೀವಿ ಸರ್ಜಾ ಅವರ ಜೊತೆಗಿನ ಬಾಲ್ಯದ ಫೋಟೋವನ್ನು ಹಾಕುವ ಮೂಲಕ ಕಂಬನಿ ಮಿಡಿದಿದ್ದಾರೆ.
Tap to resize

ಬಾಲ್ಯದಲ್ಲಿ ಚಿರು ಜೊತೆಗೆ ತೆಗೆಸಿಕೊಂಡ ಫೋಟೋಗಳನ್ನು ಐಶ್ವರ್ಯಾ, ತಮ್ಮ ಇನ್‍ಸ್ಟಾಗ್ರಾಮ್ ಶೇರ್ ಮಾಡಿಕೊಂಡಿದ್ದಾರೆ. ಆ ಫೋಟೋಗಳಲ್ಲಿ ಚಿರು, ಧ್ರುವ, ಐಶ್ವರ್ಯಾ, ಅವರ ಸಹೋದರಿ ಅಂಜನಾ, ಸೂರಜ್ ಇದ್ದಾರೆ.
. ಈ ಫೋಟೋಗೆ ‘ಚಿರಂಜೀವಿ’ ಎಂದು ಬರೆದು ಹಾರ್ಟ್ ಎಮೋಜಿ ಹಾಕಿ ಕ್ಯಾಪ್ಶನ್ ಕೊಟ್ಟಿದ್ದಾರೆ.
ಅಣ್ಣನನ್ನು ಕಳೆದುಕೊಂಡು ಐದು ದಿನಗಳ ಬಳಿಕ ಧ್ರುವ ಸರ್ಜಾ ಇನ್‍ಸ್ಟಾಗ್ರಾಂನಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದರು. ಚಿರಂಜೀವಿ ಸರ್ಜಾ ಸಾವಿಗೂ ಒಂದು ದಿನ ಮುನ್ನ ಶೇರ್ ಮಾಡಿಕೊಂಡಿದ್ದ ಫೋಟೋ ನೋಡಿ ನೋವನ್ನು ತೋಡಿಕೊಂಡಿದ್ದರು.
ಇದೀಗ ಐಶ್ವರ್ಯಾ ಅರ್ಜುನ್ ಸರ್ಜಾ ಕೂಡ ಚಿರಂಜೀವಿಯನ್ನು ನೆನೆದು ಭಾವುಕರಾಗಿದ್ದಾರೆ.

Latest Videos

click me!