ಬ್ಯಾಡ್ ಕಾಮೆಂಟ್ ಮಾಡೋರಿಗೆ ರ‍್ಯಾಪ್ ಮೂಲಕ 'ಅಸಲಿ ಬಣ್ಣ' ತೋರಿಸಿದ ಬಿಗ್‌ಬಾಸ್‌ ಖ್ಯಾತಿಯ ಇಶಾನಿ!

Published : Sep 19, 2024, 04:48 PM IST

ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟಿವ್ ಆಗಿರುವ ಇವರ ಪೋಸ್ಟ್‌ಗಳಿಗೆ ಕೆಲವರು ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ‌.  ಅಂಥವರಿಗೆ ಅಸಲಿ ಬಣ್ಣ ಎಂಬ ಈ ಹಿಪಾಪ್ ಸಾಂಗ್ ಮೂಲಕ ಇಶಾನಿ ತಿರುಗೇಟು ಕೊಟ್ಟಿದ್ದಾರೆ.

PREV
16
ಬ್ಯಾಡ್ ಕಾಮೆಂಟ್ ಮಾಡೋರಿಗೆ ರ‍್ಯಾಪ್ ಮೂಲಕ 'ಅಸಲಿ ಬಣ್ಣ' ತೋರಿಸಿದ ಬಿಗ್‌ಬಾಸ್‌ ಖ್ಯಾತಿಯ ಇಶಾನಿ!

ಬಿಗ್ ಬಾಸ್ ಖ್ಯಾತಿಯ ಇಶಾನಿ ಟ್ರೋಲ್‌ ಮಾಡೋರಿಗೆ ತಕ್ಕ ಉತ್ತರ ನೀಡುವ ‘ಅಸಲಿ ಬಣ್ಣ’ ಎಂಬ ವಿಡಿಯೋ ಹಾಡಿನಲ್ಲಿ ನಟಿಸಿದ್ದಾರೆ. ಈ ಹಾಡು ಇಶಾನಿ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆಯಾಗಿದೆ.

26

ಈ ವಿಡಿಯೋ ಹಾಡಿನ ಕುರಿತು ಇಶಾನಿ, ಇದರ ಮೂಲಕ ಮಹಿಳೆಯರಿಗೆ ಬ್ಯಾಡ್ ಕಾಮೆಂಟ್ ಮಾಡುವವರಿಗೆ ಟಾಂಗ್ ಕೊಟ್ಟಿದ್ದೇನೆ. ಅಂಥವರಿಗೆ ನಮ್ಮ ಫಿಲಿಂಗ್ಸ್ ಅರ್ಥ ಆಗಬೇಕು. ನನ್ನ ಬಗ್ಗೆ ಯಾರೆಲ್ಲ ಪದಗಳನ್ನು ಬಳಸಿದ್ದರೋ ಅದೇ ಪದಗಳನ್ನು ಅವರಿಗೆ ವಾಪಸ್ ಕೊಟ್ಟಿದ್ದೇನೆ. 
 

36

ಬಿಗ್ ಬಾಸ್ ನಡೀತಿರುವಾಗಲೇ ಈ ಹಾಡನ್ನು ಬರೆದಿದ್ದೆ. ನನಗನಿಸಿದ್ದನ್ನು ಹೇಳಿಕೊಳ್ಳಲು ಇದು ಪರ್ಫೆಕ್ಟ್ ವೇ ಅನಿಸಿತು. ಮಾರ್ಟಿನ್ ಇದಕ್ಕೆ ಪೈನಲ್ ಟಚ್ ಕೊಟ್ಟಿದ್ದಾರೆ. ಈ ಹಾಡಿನ ಉದ್ದೇಶ ಶೋಷಣೆಗೆ ಒಳಗಾದ ಹೆಣ್ಣು ಮಕ್ಕಳನ್ನು ಸ್ಟ್ರಾಂಗ್ ಮಾಡುವುದು’ ಎಂದಿದ್ದಾರೆ.
 

46

ಇಶಾನಿಯ ಹುಟ್ಟುಹಬ್ಬ ಇತ್ತೀಚೆಗಷ್ಟೆ ನಡೆದಿದ್ದು ಅದೇ ದಿನ ಅವರ ಯೂಟ್ಯೂಬ್ ಚಾನೆಲ್ ನಲ್ಲಿ ‘ಅಸಲಿ ಬಣ್ಣ’ ಹಿಪ್ ಹಾಪ್ ಹಾಡು ಬಿಡುಗಡೆ ಆಗಿದೆ. ರ‍್ಯಾಪ್ ಹಾಡಿನ ವಿಡಿಯೋ ಸಹ ಬಿಡುಗಡೆ ಆಗಿದ್ದು, ಸ್ವತಃ ಇಶಾನಿ ವಿಡಿಯೋನಲ್ಲಿ ಸಖತ್ ಡ್ಯಾನ್ಸ್ ಮಾಡಿದ್ದಾರೆ. 

56

ವೆಂಕಟ್ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಗಿರಿಗೌಡ ನಿರ್ದೇಶನ ಮಾಡಿದ್ದಾರೆ. ಮಾರ್ಟಿನ್ ಅವರ ಸಾಹಿತ್ಯ, ಕೀರ್ತನ್ ಪೂಜಾರಿ ಅವರ ಕ್ಯಾಮೆರಾ ವರ್ಕ್, ಡಿಜೆ ಲೆಥಲ್ ಅವರ ಸಂಗೀತ ಸಂಯೋಜನೆ ಈ ಹಾಡಿಗಿದೆ. 

66

ನಿರ್ದೇಶಕ ಗಿರಿ ಗೌಡ ಮಾತನಾಡಿ ‘ಇಶಾನಿ ಅವರನ್ನು ಇಷ್ಟಪಡುವವರಾಗಿ ನಾವು ಅವರಿಗೆ ಸಹಕಾರ ನೀಡುವ ದೃಷ್ಟಿಯಿಂದ ಈ ಗೀತೆ ಮಾಡಿದ್ದೇವೆ. ಇನ್ನು ಒಂದಿಷ್ಟು ಗೀತೆಗಳನ್ನು ಅವರ ಜೊತೆ ಮಾಡುತ್ತೇನೆ. ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಒಂದೇ ದಿನದಲ್ಲಿ ಇದನ್ನು ಚಿತ್ರೀಕರಿಸಿದ್ದೇವೆ’ ಎಂದರು.
 

Read more Photos on
click me!

Recommended Stories