ಬಿಗ್ಬಾಸ್ ಸೀಸನ್ 10ರ ಜನಪ್ರಿಯ ಸ್ಪರ್ಧಿ ಸಂಗೀತಾ ಶೃಂಗೇರಿ, ಶೋನಿಂದ ಹೊರಬಂದ ನಂತರ ಅಭಿಮಾನಿಗಳು ಕಾಯ್ತದ್ದ ಗುಡ್ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ ನಟಿ.
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರಲ್ಲಿ ಬಹುತೇಕರ ಅಚ್ಚುಮೆಚ್ಚಿನ ಸ್ಪರ್ಧಿಯಾಗಿದ್ದವರು ಸಂಗೀತಾ ಶೃಂಗೇರಿ. ಬಿಗ್ಬಾಸ್ನಿಂದ ಆಚೆ ಬಂದ ಬಳಿಕ ಸಂಗೀತಾ ಶೃಂಗೇರಿ ಅವರು ಯಾವುದೇ ಪ್ರಾಜೆಕ್ಟ್ಗೆ ಕೈ ಹಾಕಿರಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್ ಆಗಿದ್ದಾರೆ. ಜೊತೆಗೆ ಕ್ರಿಸ್ಟಲ್ ಬಿಜಿನೆಸ್ ಕೂಡ ಶುರು ಮಾಡಿದ್ದಾರೆ.
26
ನಟಿಯಿಂದ ಗುಡ್ನ್ಯೂಸ್
ಆದರೆ ಬಿಗ್ಬಾಸ್ನಿಂದ ಹೊರಕ್ಕೆ ಬಂದ ಮೇಲೆ ಇದೀಗ ಮೊದಲ ಬಾರಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ ನಟಿ. ಪೂಜೆ ನೆರವೇರಿಸುತ್ತಲೇ ಈ ವಿಷಯವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಅದು ಅವರ ಮುಂದಿನ ಚಿತ್ರ ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’. ಈ ಸಿನಿಮಾ ಸೆಟ್ಟೇರಿದೆ. ಇಸ್ಮಾಯಿಲ್ ಅವರು ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
36
ಮಾರಿಗೋಲ್ಡ್ ಚಿತ್ರ
ನಟಿ ಸಂಗೀತಾ ಶೃಂಗೇರಿ ಅವರು ಬಿಗ್ಬಾಸ್ನಿಂದ ಬರುತ್ತಿದ್ದಂತೆಯೇ ‘ಮಾರಿಗೋಲ್ಡ್’ ಸಿನಿಮಾ ರಿಲೀಸ್ ಆಗಿತ್ತು. ಆದರೆ ಇದು ಶೂಟಿಂಗ್ ಆಗಿದ್ದು, ಅವರು ಷೋಗೆ ಹೋಗುವ ಮೊದಲೇ. ಆದರೆ ಇದೀಗ ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಮೂಲಕ ಷೋ ಬಳಿಕದ ಮೊದಲ ಚಿತ್ರವಾಗಿದೆ.
ಸದಾಶಿವ ಶೆಟ್ಟಿ ಅವರು ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ನಟಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
56
ಕಿರುತೆರೆಯಿಂದ ಪ್ರಯಾಣ
ಇನ್ನು ನಟಿಯ ಬಗ್ಗೆ ಹೇಳುವುದೇ ಬೇಡ ಬಿಡಿ. 2016ರಲ್ಲಿ ಸ್ಟಾರ್ ಸುವರ್ಣ ವಾಹಿನಿಯ 'ಹರ ಹರ ಮಹಾದೇವ' ಕನ್ನಡ ಧಾರವಾಹಿ ಮೂಲಕ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿಕೊಟ್ಟ ಇವರು, ಪಾವರ್ತಿ ಪಾತ್ರದ ಮೂಲಕ ಖ್ಯಾತಿ ಗಳಿಸಿದರು. ಎ+ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟರು.
66
777 ಚಾರ್ಲಿಯಿಂದ ಫೇಮಸ್
ಬಳಿಕ ಸಾಲಗಾರರ ಸಹಕಾರ ಸಂಘ, 777 ಚಾರ್ಲಿ, ಲಕ್ಕಿಮ್ಯಾನ್, ಶಿವಾಜಿ ಸುರತ್ಕಲ್ 2 ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಾರ್ಲಿ ಚಿತ್ರದಿಂದ ಇವರಿಗೆ ದೊಡ್ಡ ಬ್ರೇಕ್ ಸಿಕ್ಕಿತು. ಎರಡು ಸಾವಿರಕ್ಕೂ ಹೆಚ್ಚು ಜನರು '777 ಚಾರ್ಲಿ' ಚಿತ್ರದ ನಾಯಕಿ ಪಾತ್ರಕ್ಕೆ ಆಡಿಷನ್ ಕೊಟ್ಟಿದ್ದರು. ಆದರೆ ಎಲ್ಲರನ್ನು ಮೀರಿ ಸಂಗೀತಾ ಗೆದ್ದಿದ್ದರು. ಒಳ್ಳೆ ಅವಕಾಶ ಪಡೆದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಆಗಿ ಸದ್ದು ಮಾಡಿದೆ ಚಿತ್ರ ಜೊತೆಗೆ ಹಲವು ಅವಾರ್ಡ್ಗಳನ್ನು ಬಾಚಿಕೊಂಡಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.