
ನಟಿ ಭಾರ್ಗವಿ ನಾರಾಯಣ್: ಅಭಿನಯದ ಮೂಲಕ ಕನ್ನಡಿಗರ ಮನೆ ಮನಗಳಲ್ಲಿ ಪ್ರೀತಿ ಹಂಚಿದ್ದ ಕಿರುತೆರೆಯ ಅಜ್ಜಿಯಾಗಿದ್ದ ಭಾರ್ಗವಿ ಫೆಬ್ರವರಿ ತಿಂಗಳಿನಲ್ಲಿ ಬೆಂಗಳೂರಿನ ಜಯ ನಗರ ನ್ಯಾಶನಲ್ ಕಾಲೇಜ್ ಬಳಿ ಇರುವ ಸ್ವಗೃಹದಲ್ಲಿ ಅವರು ಇಹಲೋಕ ತ್ಯಜಿಸಿದ್ದರು.
ಕಲಾತಪಸ್ವಿ ರಾಜೇಶ್: 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಫೆಬ್ರವರಿ ತಿಂಗಳಿನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರ ಪತ್ನಿ ಪಾರ್ವತಮ್ಮ ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಕಳೆದ ವರ್ಷದ ನವೆಂಬರ್ ನಲ್ಲಿ ಇಹಲೋಕ ತ್ಯಜಿಸಿದ್ದರು. ಅಂದಿನಿಂದಲೂ ರಾಜೇಶ್ ಆರೋಗ್ಯ ಸ್ವಲ್ಪ ಹದಗೆಟ್ಟಿತ್ತು.
ಟಿ ಆರ್ ಅಶ್ವತ್ಥನಾರಾಯಣ : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ಥನಾರಾಯಣ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದರು. 600ಕ್ಕೂ ಹೆಚ್ಚು ನಾಟಕಗಳಲ್ಲಿ ಬಣ್ಣ ಹಚ್ಚಿದ್ದರು.'ಚಂದವಳ್ಳಿ ತೋಟ' ಚಿತ್ರದ ನಂತರ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದುಕೊಂಡು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.
ಮೋಹನ್ ಜುನೇಜ: ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಜನಪ್ರಿಯ ಹಾಸ್ಯ ನಟ ಮೋಜನ್ ಜುನೇಜಾ ನಾರೋಗ್ಯದಿಂದ ಬಳಲುತ್ತಿದ್ದು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೇ ತಿಂಗಳಿನಲ್ಲಿ ಕೊನೆಯುಸಿರೆಳೆದಿದ್ದರು.
ಕಿರುತೆರೆ ನಟ ಉದಯ್ ಹುತ್ತಿನಗದ್ದೆ: 1988 ರಲ್ಲಿ ಡಾ.ರಾಜ್ ಕುಮಾರ್ ನಾಯಕ ನಟನಾಗಿ ಕಾಣಿಸಿಕೊಂಡಿದ್ದ ದೇವತಾ ಮನುಷ್ಯ ಸೇರಿ ಹಲವು ಚಿತ್ರದಲ್ಲಿ ಇವರು ನಟಿಸಿದ ಹಿರಿಯ ನಟ ಉದಯ್ ಹುತ್ತಿನಗದ್ದೆ ಬೆಂಗಳೂರಿನ ರಾಜಾಜಿನಗರದ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದರು.
ನಿರ್ಮಾಪಕ ನರ್ಗೀಸ್ ಬಾಬು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ವಿತರಕ ನರ್ಗಿಸ್ ಬಾಬು ಅನಾರೋಗ್ಯದಿಂದ ಬಳಲುತ್ತಿದ್ದು ಆಗಸ್ಟ್ ತಿಂಗಳಿನಲ್ಲಿ ಮೃತಪಟ್ಟಿದ್ದಾರೆ.76 ವರ್ಷದ ನರ್ಗಿಸ್ ಬಾಬುಕನ್ನಡದಲ್ಲಿ ಸುಂದರ ಪುರಷ, ಯಾರಿಗೆ ಬೇಡ ದುಡ್ಡು, ಧನ್ ಧನಾ ಧನ್, ಅನಂತ್ ಗೌಡ ವರ್ಸಸ್ ರೆಡ್ಡಿ ಸಿನಿಮಾಗಳನ್ನ ನರ್ಗಿಸ್ ಬಾಬು ನಿರ್ಮಾಣ ಮಾಡಿದ್ದಾರೆ.
ಕೆಜಿಎಫ್ ತಾತ ಕೃಷ್ಣ ಜಿ ರಾವ್: ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿ ಮಾಡಿದ ಕೆಜಿಎಫ್ ಸಿನಿಮಾದಲ್ಲಿ ಪಂಚ್ ಡೈಲಾಗ್ ಹೊಡೆಯುವ ಮೂಲಕ ವಿಶ್ವಾದ್ಯಂತ ಖ್ಯಾತಿ ಗಳಿಸಿದ್ದ ಹಿರಿಯ ನಟ ಕೃಷ್ಣ ಜಿ.ರಾವ್ ಡಿಸೆಂಬರ್ ತಿಂಗಳಿನಲ್ಲಿ ಇಹಲೋಕ ತ್ಯಜಿಸಿದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
ನಿರ್ದೇಶಕ ಮುರಳಿ ಕೃಷ್ಣ: ನವೆಂಬರ್ ತಿಂಗಳಿನಲ್ಲಿ ನಿರ್ದೇಶಕ ಮುರಳಿ ಕೃಷ್ಣ ಅವರು ಬ್ರೈನ್ ಟ್ಯೂಮರ್ ಶಸ್ತ್ರಚಿಕಿತ್ಸೆ ಬಳಿಕ ಹೃದಯಾಘಾತದಿಂದ ನಿಧನರಾದ್ದರು.
ಲೋಹಿತಾಶ್ವ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಲೋಹಿತಾಶ್ವ ನವೆಂಬರ್ ತಿಂಗಳಿನಲ್ಲಿ ಅಗಲಿದ್ದರು. ನಟ ಲೋಹಿತಾಶ್ವ ಸುಮಾರು 500 ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕಾಸ್ಟ್ಯೂಮ್ ಡಿಸೈನರ್ ಗಂಡಸಿ ನಾಗರಾಜ್: ಸ್ಯಾಂಡಲ್‌ವುಡ್‌ನಲ್ಲಿ ಹಲವು ವರ್ಷಗಳ ಕಾಲ ವಸ್ತ್ರಾಲಂಕಾರ ಕಲಾವಿದನಾಗಿ ಹಾಗೂ ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದ ಗಂಡಸಿ ನಾಗರಾಜ್ ಡಿಸೆಂಬರ್ 11ರಂದು ಕೊನೆಯುಸಿರು ಎಳೆದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನಟ ಗಂಡಸಿ ನಾಗರಾಜ್ ಚಿಕಿತ್ಸೆ ಫಲಿಸದೆ ನಿಧನರಾದರು.
ನಿರ್ಮಾಪಕ ಆನೇಕಲ್ ಬಾಲರಾಜ್: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಆನೇಕಲ್ ಬಾಲರಾಜ್ ಬೆಳಗ್ಗೆ ವಾಕಿಂಗ್‌ಗೆ ತೆರಳುವಾಗಿ ವಾಹನವೊಂದು ಹಿಂದಿನಿಂದ ತಾಕಿ ಪುಟ್ ಪಾತ್‌ಗೆ ತಲೆ ತಾಕಿದೆ.ತಕ್ಷಣವೇ ಹತ್ತಿರವಿದ್ದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸ ಫಲಕಾರಿ ಆಗದೆ ಕೊನೆಯುಸಿರೆಳೆದರು.
ನಿರ್ದೇಶಕ ಪ್ರದೀಪ್ ರಾಜ್: ಇಡೀ ಕನ್ನಡ ಚಿತ್ರರಂಗದಲ್ಲಿ ಹಳ್ಳಿ ಕಥೆ ಹಾಗೂ ಮುದ್ದಾದ ಲವ್ ಸ್ಟೋರಿ ಕೊಟ್ಟ ನಿರ್ದೇಶಕ ಪ್ರದೀಪ್ ರಾಜ್ ಜನವರಿಯಲ್ಲಿ ನಮ್ಮನ್ನು ಅಗಲಿದ್ದರು. ಹಲವು ತಿಂಗಳಿನಿಂದ ಅರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕೊರೋನಾ ವೈರಸ್‌ಗೆ ಬಲಿಯಾಗಿದ್ದಾರೆ.