ಬೆಸ್ಟ್ ಆ್ಯಕ್ಟರ್ ಪ್ರಶಸ್ತಿ ಪಡೆದ ನಿರ್ದೇಶಕ ಇಂದ್ರಜಿತ್ ಪುತ್ರ ಸಮರ್ಜಿತ್ ಲಂಕೇಶ್

Published : Jan 30, 2025, 04:18 PM ISTUpdated : Jan 30, 2025, 04:19 PM IST

ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಅದ್ದೂರಿಯಾಗಿ ನೆರವೇರಿತು. 

PREV
17
ಬೆಸ್ಟ್ ಆ್ಯಕ್ಟರ್ ಪ್ರಶಸ್ತಿ ಪಡೆದ ನಿರ್ದೇಶಕ ಇಂದ್ರಜಿತ್ ಪುತ್ರ ಸಮರ್ಜಿತ್ ಲಂಕೇಶ್

ಭಾರತದ ಸಿನಿಮಾ ರಂಗದಲ್ಲಿ ತನ್ನ ನಟನೆಯ ಮೂಲಕ ಭರವಸೆ ಮೂಡಿಸಿರುವ ಸಮರ್ಜಿತ್ ಲಂಕೇಶ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ ಲುಮಿರೆ ಅತ್ಯುತ್ತಮ ಉದಯೋನ್ಮುಖ ನಟ ಪ್ರಶಸ್ತಿ ಕಳೆದ ವರ್ಷ ಲಭಿಸಿದೆ. 

27

ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ: ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಅದ್ದೂರಿಯಾಗಿ ನೆರವೇರಿತು. 

37

ಹತ್ತಾರು ಗಣ್ಯರ ಸಮ್ಮುಖದಲ್ಲಿ ಸಾಧಕರಿಗೆ ಪ್ರಶಸ್ತಿ ವಿತರಣೆ ಮಾಡಲಾಯ್ತು ಹಾಗೆ  ಉದಯೋನ್ಮುಖ ನಟ ಪ್ರಶಸ್ತಿ ಪಡೆದ ಸಮರ್ಜಿತ್ ಲಂಕೇಶ್ ತನ್ನ ಮಡಿಲಿಗೆ ಮತ್ತೊಂದು ಪ್ರಶಸ್ತಿಯನ್ನು ಸೇರಿಸಿಕೊಂಡಿದ್ದಾರೆ.

47

ಗೌರಿ ಚಿತ್ರ : ಗೌರಿ’ ಸಿನಿಮಾದ ಮೂಲಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಗೆ ವೀಕ್ಷಕರಿಂದ ಮೆಚ್ಚುಗೆ ಸಿಕ್ಕಿತು.

57

ಡಾನ್ಸ್ ಹಾಗೂ ಮಾರ್ಷಿಯಲ್ ಆರ್ಟ್ಸ್ ನಲ್ಲಿ ಪ್ರವೀಣತೆಯನ್ನು ಹೊಂದಿರುವ ಸಮರ್ಜಿತ್ ಲಂಕೇಶ್ ಅವರು ರಾಷ್ಟ್ರ ಮಟ್ಟದಲ್ಲಿ ಪ್ರೇಕ್ಷಕ ಸಮೂಹವನ್ನು ಹೊಂದಿದ್ದಾರೆ. ಈಗ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಬ್ಯಾನರ್ ನಡಿ ನಟಿಸುತ್ತಿದ್ದಾರೆ. 

67

ಪ್ರಮುಖ ಪಾತ್ರದಲ್ಲಿ ನಡೆಸುತ್ತಿರುವ ಸಮರ್ಜಿತ್ ಲಂಕೇಶ್ ಅವರು ದೇಶದ ಪ್ರಸಿದ್ಧ ತಾರೆಯರ ಜೊತೆಗೆ ಪರದೆಯನ್ನು ಹಂಚಿಕೊಳ್ಳುತ್ತಿದ್ದಾರೆ. ತನ್ನ ಪ್ರತಿಭೆ ಹಾಗೂ ನಟನೆಯ ಸಮರ್ಪಣಾ ಭಾವದಿಂದ ಸಮರ್ಜಿತ್ ಲಂಕೇಶ್ ಭಾರತದ ಸಿನಿಮಾ ರಂಗದಲ್ಲಿ ತಾರೆಯಾಗಿ ಉದಯಿಸುವ ಭರವಸೆ ಮೂಡಿಸಿದ್ದಾರೆ.

77

ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ಅವರು ನಾಯಕ ಪಾತ್ರ ಮಾಡುವ ಮೂಲಕ ಮೆಚ್ಚುಗೆ ಪಡೆದಿದ್ದರು. ಈ ಚಿತ್ರದಲ್ಲಿ ನಾಯಕಿಯಾಗಿ ಸಾನ್ಯಾ ಅಯ್ಯರ್ ನಟಿಸಿದ್ದರು.

Read more Photos on
click me!

Recommended Stories