ನಿರ್ದೇಶಕ ಪುನೀತ್ ರಂಗಸ್ವಾಮಿ, ಇದು ಸಂಘರ್ಷದ ಕಥೆಯಲ್ಲ. ಇದೊಂದು ಪ್ರೇಮಕಥೆ. ಜೊತೆಗೆ ನಾವೇನು ತೆಗೆದುಕೊಂಡಿದ್ದೇವೆ ಆ ಕಾಲಘಟ್ಟದಲ್ಲಿ ನಡೆದ ಕಥೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ ಎಂದು ತಿಳಿಸಿದರು.
ಚೌಕ , ಕಾಟೇರ ಸಿನಿಮಾಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರುವಂತಿದೆ ಟೀಸರ್ ಇದಾಗಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್, ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ. ಅದ್ವಿತ್ ಗುರುಮೂರ್ತಿ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ, ನಾಗಾರ್ಜುನ ಶರ್ಮಾ ಹಾಗೂ ಪುನೀತ್ ರಂಗಸ್ವಾಮಿ ಸಂಭಾಷಣೆ, ಡಿ ಇಮ್ಮನ್ ಸಂಗೀತ ಚಿತ್ರಕ್ಕಿದೆ. ಈ ಸಿನಿಮಾ ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗುತ್ತಿದೆ.