ತುಳು ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಸುನೀಲ್ ಶೆಟ್ಟಿ: ಬಿಗ್ ಬಾಸ್ ವಿನ್ನರ್ ಸಿನಿಮಾದಲ್ಲಿ ನಟನೆ!

First Published | Jan 13, 2025, 5:01 PM IST

ತುಳುನಾಡಿನವರೇ ಆದ ಬಾಲಿವುಡ್‌ ಸೂಪರ್‌ಸ್ಟಾರ್ ತುಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜ.14ರಂದು ಅವರು ಮಂಗಳೂರಿಗೆ ಬರುತ್ತಿದ್ದಾರೆ. ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ನಿರ್ದೇಶಕ ರೂಪೇಶ್ ಶೆಟ್ಟಿ ಹೇಳಿದ್ದಾರೆ. 
 

ತುಳುನಾಡಿನವರೇ ಆದ ಬಾಲಿವುಡ್‌ ಸೂಪರ್‌ಸ್ಟಾರ್ ತುಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರೂಪೇಶ್‌ ಶೆಟ್ಟಿ ನಟನೆ, ನಿರ್ದೇಶನದ ‘ಜೈ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಮೊದಲು ಅವರು ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರದ ಮೂಲಕ ಕನ್ನಡಕ್ಕೆ ಬಂದಿದ್ದರು.

ಇದೊಂದು ಪೊಲಿಟಿಕಲ್ ಡ್ರಾಮಾ ಆಗಿದ್ದು, ಸುನೀಲ್ ಶೆಟ್ಟಿ ಪ್ರಮುಖ ಘಟ್ಟದಲ್ಲಿ ಕಾಣಿಸಿಕೊಳ್ಳುತ್ತಾರೆ. ಸುನೀಲ್ ಶೆಟ್ಟಿ ಅವರಿಗೆ ತುಳು ಸಿನಿಮಾದಲ್ಲಿ ನಟಿಸುವ ಆಸೆ ಇತ್ತು. ಅವರಿಗೆ ಕತೆ, ಪಾತ್ರ ವಿವರಿಸಿ ಹೇಳಿದಾಗ ಅವರು ಖುಷಿಯಾಗಿ ಒಪ್ಪಿಕೊಂಡಿದ್ದಾರೆ. 
 

Tap to resize

ಜ.14ರಂದು ಅವರು ಮಂಗಳೂರಿಗೆ ಬರುತ್ತಿದ್ದಾರೆ. ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ನಿರ್ದೇಶಕ ರೂಪೇಶ್ ಶೆಟ್ಟಿ ಹೇಳಿದ್ದಾರೆ. ರಾಜಕೀಯ ಕೇಂದ್ರವಾಗಿಟ್ಟುಕೊಂಡ ಕಥಾ ಹಂದರವನ್ನು ಹೊಂದಿರು ಈ ಸಿನಿಮಾದಲ್ಲಿ ತುಳುನಾಡಿನ ಪ್ರಮುಖ ಕಲಾವಿದರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

'ಜೈ' ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಕರಾವಳಿಯನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, ಬೈಕಂಪಾಡಿಯಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ. 

ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.
 

ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
 

ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ.
 

Latest Videos

click me!