ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜನವರಿ 26ರಂದು ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
26
ಬೆಂಗಳೂರಿನ ಐಷಾರಾಮಿ ರೆಸಾರ್ಟ್‌ನಲ್ಲಿ ಸಿನಿಮಾ ಸ್ನೇಹಿತರು, ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ಆರತಕ್ಷತೆ ಹಮ್ಮಿಕೊಂಡಿದ್ದರು. ಗಣ್ಯರು ಭಾಗಿಯಾಗಿ ಆಶೀರ್ವಾದ ಮಾಡಿದ್ದಾರೆ.
36
ಈ ವೇಳೆ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಆರತಕ್ಷತೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
46
ಸ್ವತಃ ಪುನೀತ್ ರಾಜ್‌ಕುಮಾರ್ ಆರತಕ್ಷತೆಯಲ್ಲಿ ಭಾಗಿಯಾಗಿ ಜೋಡಿಗೆ ಆಶೀರ್ವಾದ ಮಾಡಿದಂತೆ ಇದೆ ಎನ್ನಬಹುದು. ಅಭಿಮಾನಿಗಳು ಎಡಿಟ್ ಮಾಡಿರುವ ಫೋಟೋ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.
56
ಅಪ್ಪು ನಮ್ಮ ಜೊತೆಗಿದ್ದಾರೆ ಪ್ರತಿಯೊಂದು ಹಬ್ಬ ಕಾರ್ಯಕ್ರಮಗಳನ್ನು ನೋಡುತ್ತಿದ್ದಾರೆ ಎನ್ನುವ ಉದ್ದೇಶದಿಂದ ಅಭಿಮಾನಿಗಳು ಫೋಟೋ ಎಡಿಟ್ ಮಾಡುತ್ತಿದ್ದಾರೆ. ಸಖತ್ ವೈರಲ್ ಆಗುತ್ತಿದೆ.
66
ಪುನೀತ್ ರಾಜ್‌ಕುಮಾರ್ ನಿರ್ಮಾಣ ಮಾಡಿದ ಮಾಯಾ ಬಜಾರ್ ಸಿನಿಮಾದಲ್ಲಿ ವಸಿಷ್ಠ ಅಭಿನಯಿಸಿದ್ದರು. ಹಾಗೇ ಪುನೀತ್ ಅಂಜನಿ ಪುತ್ರ ಸಿನಿಮಾದಲ್ಲಿ ಹರಿಪ್ರಿಯಾ ವಿಶೇಷ ಡ್ಯಾನ್ಸ್ ಮಾಡಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.