Golden Star Ganesh 'ಬೃಂದಾ ವಿಹಾರಿ'ಯಾದ ರಾಮಾಚಾರಿ ಸೀರಿಯಲ್‌ ನಟಿ ದೇವಿಕಾ ಭಟ್; ರಾಧಾ ರಾಧಾ ಎಂದ ವೀಕ್ಷಕರು

Published : May 04, 2026, 12:47 PM IST

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೀರೋ ಆಗಿ 20 ವರ್ಷ ಆಗಿದೆ. ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ "ಬೃಂದಾ ವಿಹಾರಿ" ಸಿನಿಮಾದಲ್ಲಿ ಗಣೇಶ್‌ ನಟಿಸಿದ್ದಾರೆ. ತುಮಕೂರಿನಲ್ಲಿ ಇತ್ತೀಚೆಗೆ ಈ ಸಿನಿಮಾದ "ರಾಧಾ ರಾಧಾ" ಹಾಡು ಅದ್ದೂರಿಯಾಗಿ ಬಿಡುಗಡೆಯಾಯಿತು. 

PREV
14
ಗೋಲ್ಡನ್‌ ಸ್ಟಾರ್‌ ಗಣೇಶ್‌ಗೂ ತುಮಕೂರಿಗೂ ನಂಟು!

ಗೋಲ್ಡನ್‌ ಸ್ಟಾರ್‌ ಗಣೇಶ್‌ ಮಾತನಾಡಿ, “ನನಗೂ, ತುಮಕೂರಿಗೂ ಹತ್ತಿರದ ನಂಟು. ನಾನು ಓದಿದ್ದು ನೆಲಮಂಗಲದಲ್ಲಿ. ಆಗಾಗ ತುಮಕೂರಿಗೆ ಬರುತ್ತಿದ್ದೆ. ಈಗ ನನ್ನ ಅಭಿನಯದ "ಬೃಂದಾವಿಹಾರಿ" ಚಿತ್ರದ ಹಾಡು ತುಮಕೂರಿನಲ್ಲಿ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ. ಇನ್ನೂ, ನಾನು ನಾಯಕನಾಗಿ ಇಪ್ಪತ್ತು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಯಶಸ್ಸನ್ನು ಅಭಿಮಾನಿಗಳಿಗೆ ಅರ್ಪಿಸುತ್ತೇನೆ. ಅವರಿಂದಲೇ ಇದು ಸಾಧ್ಯವಾಗಿದ್ದು. ಇದೇ ಸಂದರ್ಭದಲ್ಲಿ ನನ್ನ ಎಲ್ಲಾ ಚಿತ್ರದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ತಿಳಿಸುತ್ತೇನೆ. ವಿಶೇಷ ಧನ್ಯವಾದವನ್ನು ಉದಯ ಟಿವಿಗೆ ಹೇಳುತ್ತೇನೆ. ಅಲ್ಲಿನ "ಕಾಮಿಡಿ ಟೈಮ್" ಕಾರ್ಯಕ್ರಮವೇ ನನ್ನನ್ನು ಚಿತ್ರರಂಗಕ್ಕೆ ಕರೆತಂದಿದ್ದು. "ಬೃಂದಾ ವಿಹಾರಿ" ಚಿತ್ರದ ಮೊದಲ ಹಾಡು "ರಾಮ ರಾಮ" ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈಗ ಬಿಡುಗಡೆಯಾಗಿರುವ "ರಾಧಾ ರಾಧಾ" ಹಾಡು ಸಹ ಎಲ್ಲರಿಗೂ ಮೆಚ್ಚುಗೆಯಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ” ಎಂದರು.

24
ನಿರ್ಮಾಪಕರಿಗೆ ಖುಷಿ!

"ಬೃಂದಾ ವಿಹಾರಿ" ನಮ್ಮ ಸಂಸ್ಥೆಯ ನಿರ್ಮಾಣದ ನಾಲ್ಕನೇ ಚಿತ್ರ. ಇಂದು ತುಮಕೂರಿನಲ್ಲಿ ಸಹಸ್ರಾರು ಜನರ ಉಪಸ್ಥಿತಿಯಲ್ಲಿ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದ್ದು ಬಹಳ ಸಂತೋಷವಾಗಿದೆ ಎಂದು ನಿರ್ಮಾಪಕ ಸಮೃದ್ಧಿ ಮಂಜುನಾಥ್ ತಿಳಿಸಿದರು.

34
ದೇವಿಕಾ ಭಟ್‌ಗೆ ಮೊದಲ ಸಿನಿಮಾ!

“ಇದು ನನ್ನ ಮೊದಲ ಸಿನಿಮಾ. ಗಣೇಶ್ ಅವರ ಜೊತೆಗೆ ನಟಿಸಿದ್ದು ಖುಷಿಯಾಗಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ” ಎಂದರು ದೇವಿಕಾ ಭಟ್. ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

44
ಈ ಹಾಡನ್ನು ಬರೆದವರಾರು?

ಈ ಹಾಡನ್ನು ಡಾ ವಿ.ನಾಗೇಂದ್ರ ಪ್ರಸಾದ್ ಬರೆದಿದ್ದಾರೆ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿದ್ದಾರೆ. ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ಹಾಡಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories