ʻಕಾಮಿಡಿ ಟೈಮ್ʼ ಕಾರ್ಯಕ್ರಮವೇ ನನ್ನನ್ನ ಚಿತ್ರರಂಗಕ್ಕೆ ಕರೆತಂದಿದ್ದು. ಬೃಂದಾವಿಹಾರಿ ಚಿತ್ರದ ಮೊದಲ ಹಾಡು ರಾಮ ರಾಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್.
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಬೃಂದಾವಿಹಾರಿ’ ಚಿತ್ರದ ‘ರಾಧಾ ರಾಧಾ...’ ಎನ್ನುವ ಹಾಡನ್ನು ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಈ ಹಾಡಿಗೆ ಸಾಹಿತ್ಯ ಬರೆದಿರುವ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿದ್ದಾರೆ. ಸಿದ್ ಶ್ರೀರಾಮ್ ಹಾಗೂ ಚಿನ್ಮಯಿ ಹಾಡಿದ್ದಾರೆ.
25
ಬಹಳ ಖುಷಿಯಾಗಿದೆ
ಗಣೇಶ್, ನನಗೂ ಹಾಗೂ ತುಮಕೂರಿಗೂ ಹತ್ತಿರದ ನಂಟು. ನಾನು ಓದಿದ್ದು ನೆಲಮಂಗಲದಲ್ಲಿ. ಆಗಾಗ ತುಮಕೂರಿಗೆ ಬರುತ್ತಿದ್ದೆ. ಈಗ ನನ್ನ ಅಭಿನಯದ ಬೃಂದಾವಿಹಾರಿ ಸಿನಿಮಾದ ಹಾಡು ತುಮಕೂರಿನಲ್ಲಿ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ. ಇನ್ನೂ, ನಾನು ನಾಯಕನಾಗಿ ಇಪ್ಪತ್ತು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಯಶಸ್ಸನ್ನ ಅಭಿಮಾನಿಗಳಿಗೆ ಅರ್ಪಿಸುತ್ತೇನೆ. ಅವರಿಂದಲೇ ಇದು ಸಾಧ್ಯವಾಗಿದ್ದು.
35
ನಿಮ್ಮೆಲ್ಲರ ಪ್ರೋತ್ಸಾಹ ಇರಲಿ
ಇದೇ ಸಂದರ್ಭದಲ್ಲಿ, ನನ್ನ ಎಲ್ಲಾ ಚಿತ್ರದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ತಿಳಿಸುತ್ತೇನೆ. ವಿಶೇಷ ಧನ್ಯವಾದವನ್ನ ಉದಯ ಟಿವಿಗೆ ಹೇಳುತ್ತೇನೆ. ಅಲ್ಲಿನ ʻಕಾಮಿಡಿ ಟೈಮ್ʼ ಕಾರ್ಯಕ್ರಮವೇ ನನ್ನನ್ನ ಚಿತ್ರರಂಗಕ್ಕೆ ಕರೆತಂದಿದ್ದು. ಬೃಂದಾವಿಹಾರಿ ಚಿತ್ರದ ಮೊದಲ ಹಾಡು ರಾಮ ರಾಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈಗ ಬಿಡುಗಡೆಯಾಗಿರುವ ರಾಧಾ ರಾಧಾ ಹಾಡು ಸಹ ಎಲ್ಲರಿಗೂ ಮೆಚ್ಚುಗೆಯಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು.
ಬೃಂದಾ ವಿಹಾರಿ ನಮ್ಮ ಸಂಸ್ಥೆಯ ನಿರ್ಮಾಣದ ನಾಲ್ಕನೇ ಸಿನಿಮಾ. ಇಂದು ತುಮಕೂರಿನಲ್ಲಿ ಸಹಸ್ರಾರು ಜನರ ಉಪಸ್ಥಿತಿಯಲ್ಲಿ ನಮ್ಮ ಸಿನಿಮಾದ ಹಾಡು ರಿಲೀಸ್ ಆಗಿದ್ದು ಬಹಳ ಸಂತೋಷವಾಗಿದೆ ಎಂದು ನಿರ್ಮಾಪಕ ಸಮೃದ್ಧಿ ಮಂಜುನಾಥ್ ತಿಳಿಸಿದರು.
55
ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ
ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರವನ್ನ ಸಮೃದ್ಧಿ ವಿ ಮಂಜುನಾಥ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಶ್ರೀನಿವಾಸರಾಜು ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ನಾಯಕಿಯರಾಗಿ ಅಭಿನಯಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.